Saturday, 14th December 2024

ಇಂದಿನಿಂದ ಏ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು : ಇಂದಿನಿಂದ ಏಪ್ರಿಲ್ 6 ರವರೆಗೆ ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಏ.6ರವರೆಗೂ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮ ರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ನಾಳೆ ಭಾರೀ ಮಳೆ ಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಯಿದ್ದು, ಇಂದಿನಿಂದ ನಾಲ್ಕು ದಿನ ಬೆಂಗಳೂರು, ಮೈಸೂರು, ಹಾಸನ, ಕೊಡಗು, ಮಂಡ್ಯ, ರಾಮನಗರ, ಕೋಲಾರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಏ. 5 ಹಾಗೂ 6ರಂದು ಕೂಡ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.