Tuesday, 5th November 2024

ಜು.19ರ ತನಕ ಮಳೆ ಅಬ್ಬರ: ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಜು.19ರ ತನಕ ಮಳೆಯಾಗಲಿದೆ.

ಮುಂಬೈ, ಮಹಾರಾಷ್ಟ್ರ, ಕೇರಳ, ಆಂಧ್ರ ಪ್ರದೇಶದ ಹಲವು ಭಾಗದಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿನ ಅಧಿಕಾರಿ, ವಿಜ್ಞಾನಿ ಪ್ರಸಾದ್ ಮಾಹಿತಿ ನೀಡಿದರು. ಹವಾಮಾನದಲ್ಲಿನ ಬದಲಾವಣೆ 11 ದಿನಗಳ ಕಾಲ ಹೀಗೆ ಮುಂದುವರಿಯಲಿವೆ.

 

ಕರ್ನಾಟಕ ರಾಜ್ಯದ ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು (ರೆಡ್ ಅಲರ್ಟ್ ಘೋಷಿಸಲಾಗಿದೆ) ಮಲೆನಾಡು, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ.

ಮಹಾರಾಷ್ಟ್ರ, ಮುಂಬೈ, ಸತರಾ, ಉತ್ತರ ಕೊಂಕಣ ಹಾಗೂ ಗೋವಾದ ಒಂದಷ್ಟು ಭಾಗಗಳಲ್ಲಿ ಮಳೆ ಆರ್ಭಟಿಸಲಿದೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ ಕರಾವಳಿ ಭಾಗದಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತ ಕೇರಳ ರಾಜ್ಯ ಕರಾವಳಿ ಕಡೆಗೆ ಸಾಗಿದೆ. ಇದು ತೀವ್ರ ಗೊಂಡರೆ ಚಂಡಮಾರುತ ವಾಗಿ ಬದಲಾಗಬಹುದು.

ಜು.19ರವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ, ಮಲೆನಾಡು ಸೇರಿದಂತೆ ದೇಶದ ಮುಂಬೈ, ಮಹಾರಾಷ್ಟ್ರ, ಕೇರಳ, ಆಂಧ್ರದ ಅನೇಕ ಭಾಗಗಳಲ್ಲಿ ಮಳೆ ಆರ್ಭಟ ಮುಂದು ವರಿಯಲಿದೆ.