ಬೆಂಗಳೂರು: ಕರ್ಮ ಬ್ರೋಸ್ ಪ್ರೊಡಕ್ಷನ್ ತನ್ನ ಅತ್ಯಂತ ನಿರೀಕ್ಷಿತ ʼರಾಜು ಜೇಮ್ಸ್ ಬಾಂಡ್ʼ ಚಿತ್ರದ (Raju James Bond Movie) ಹಾಡೊಂದನ್ನು ನೂತನ ವರ್ಷದ ಆರಂಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ವಿಶೇಷವೆಂದರೆ ಈ ಹಾಡಿನ ಜತೆಗೆ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಗಲಿದೆ.
ಮೊದಲೇ ತಿಳಿಸಿದಂತೆ ಡಿಸೆಂಬರ್ 27 ರಂದು ಈ ಚಿತ್ರ ತೆರೆಗೆ ಬರಬೇಕಿತ್ತು. ಆದರೆ ʼUIʼ ಹಾಗೂ ʼಮ್ಯಾಕ್ಸ್ʼ ಚಿತ್ರಗಳು ಡಿಸೆಂಬರ್ ಅಂತ್ಯದಲ್ಲಿ ಬಿಡುಗಡೆಯಾದ ಕಾರಣ ನಮ್ಮ ಚಿತ್ರದ ಬಿಡುಗಡೆಯನ್ನು ಸ್ವಲ್ಪ ಮುಂದೆ ಹಾಕಿರುವುದಾಗಿ ನಿರ್ಮಾಪಕರಾದ ಮಂಜುನಾಥ್ ವಿಶ್ವಕರ್ಮ (ಲಂಡನ್) ಹಾಗೂ ಕಿರಣ್ ಭರ್ತೂರು (ಕೆನಡಾ) ತಿಳಿಸಿದ್ದಾರೆ.
ಶೀಘ್ರದಲ್ಲೇ ಚಿತ್ರವನ್ನು ಬಿಡುಗಡೆ ಮಾಡುವ ಸಿದ್ದತೆ ನಡೆಯುತ್ತಿದೆ ಎಂದು ತಿಳಿಸಿರುವ ನಿರ್ದೇಶಕ ದೀಪಕ್ ಮಧುವನಹಳ್ಳಿ, ಈ ಚಿತ್ರ ತನ್ನ ಮನಮೋಹಕ ಕಥೆ, ಹಾಸ್ಯ, ಲಂಡನ್‌ನ ಅದ್ಭುತ ದೃಶ್ಯಗಳು ಮತ್ತು ಮಧುರವಾದ ಸಂಗೀತದೊಂದಿಗೆ ಪ್ರೇಕ್ಷಕರನ್ನು ಆಕರ್ಷಿಸುವ ಭರವಸೆಯನ್ನು ನೀಡುತ್ತಿದೆ. ʼರಾಜು ಜೇಮ್ಸ್ ಬಾಂಡ್ʼ” ಹಾಸ್ಯ ಮತ್ತು ಹೈಸ್ಟ್ ಡ್ರಾಮಾದ ಸಂಯೋಜನೆಯನ್ನು ತೋರಿಸುತ್ತದೆ. ಚಿತ್ರದ ಟೀಸರ್ ಮತ್ತು ಹಾಡುಗಳ ಬಿಡುಗಡೆ ನಂತರ ಈ ಚಿತ್ರವು ಈಗಾಗಲೇ ಗಮನಾರ್ಹ ಚರ್ಚೆಯನ್ನು ಹುಟ್ಟುಹಾಕಿದೆ ಮತ್ತು ಅತ್ಯಂತ ಗಮನಾರ್ಹ ಚಿತ್ರವಾಗಿ ಹೊರಹೊಮ್ಮುವ ನಿರೀಕ್ಷೆಯಿದೆ ಎನ್ನುತ್ತಾರೆ.
ಈ ಸುದ್ದಿಯನ್ನೂ ಓದಿ | Drone Training: ಡ್ರೋನ್ ತರಬೇತಿಗೆ ಅರ್ಜಿ ಆಹ್ವಾನ; ಡಿ.23 ಕೊನೆ ದಿನ
ʼಫಸ್ಟ್ ರ‍್ಯಾಂಕ್ ರಾಜುʼ ಖ್ಯಾತಿಯ ಗುರುನಂದನ್ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈ ಜಗದೀಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ.