ಬೆಂಗಳೂರು: ನಟಿ ಹೇಮಾ ಚೌಧರಿ, ತುಂಗಭದ್ರಾ ಡ್ಯಾಂ ಗೇಟ್ ಸಮಸ್ಯೆ ಪರಿಹರಿಸಿದ ಎಂಜಿನಿಯರ್ ಕನ್ನಯ್ಯ ನಾಯ್ಡು ಸೇರಿ 69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು (Rajyotsava Award 2024) ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಶುಕ್ರವಾರ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಸಭಾಪತಿ ಬಸವರಾಜ ಹೊರಟ್ಟಿ, ಸಭಾಧ್ಯಕ್ಷ ಯು.ಟಿ.ಖಾದರ್ ಮತ್ತಿತರ ಗಣ್ಯರು ಉಪಸ್ಥಿತದಸ್ದರು.
2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಯೋಧ್ಯೆ ಬಾಲ ರಾಮನ ಮೂರ್ತಿ ಶಿಲ್ಪಿ ಅರುಣ್ ಯೋಗಿರಾಜ್, ಮಾಜಿ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್, ಐಐಎಸ್‌ಸಿ ವಿಜ್ಞಾನಿ ಟಿವಿ ರಾಮಚಂದ್ರ, ಪವಾಡ ಬಂಜಕ ಹುಲಿಕಲ್ ನಟರಾಜ್ ಸೇರಿ 69 ಸಾಧಕರು ಆಯ್ಕೆಯಾಗಿದ್ದರು. ಇನ್ನು ಈ ಬಾರಿ ಅರ್ಜಿಯನ್ನು ಹಾಕದ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಯು ಐದು ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನವನ್ನು ಒಳಗೊಂಡಿದೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿ
ಜಾನಪದ ಕ್ಷೇತ್ರ
ಇಮಾಮಸಾಬ ಎಂ. ವಲ್ಲೆಪನವರ, ಧಾರವಾಡ
ಅಶ್ವ ರಾಮಣ್ಣ, ಬಳ್ಳಾರಿ
ಕುಮಾರಯ್ಯ, ಹಾಸನ
ವೀರಭದ್ರಯ್ಯ, ಚಿಕ್ಕಬಳ್ಳಾಪುರ
ನರಸಿಂಹಲು (ಅಂಧ ಕಲಾವಿದ), ಬೀದರ್
ಬಸವರಾಜ ಸಂಗಪ್ಪ ಹಾರಿವಾಳ, ವಿಜಯಪುರ
ಎಸ್.ಜಿ. ಲಕ್ಷ್ಮೀದೇವಮ್ಮ, ಚಿಕ್ಕಮಗಳೂರು
ಪಿಚ್ಚಳ್ಳಿ ಶ್ರೀನಿವಾಸ, ಕೋಲಾರ
ಲೋಕಯ್ಯ ಶೇರ (ಭೂತಾರಾಧನೆ), ದಕ್ಷಿಣ ಕನ್ನಡ
ಚಲನಚಿತ್ರ-ಕಿರುತೆರೆ
ಹೇಮಾ ಚೌಧರಿ, ಬೆಂಗಳೂರು
ಎಂ.ಎಸ್. ನರಸಿಂಹಮೂರ್ತಿ, ಬೆಂಗಳೂರು
ಸಂಗೀತ ಕ್ಷೇತ್ರ
ಪಿ. ರಾಜಗೋಪಾಲ, ಮಂಡ್ಯ
ಎಎನ್ ಸದಾಶಿವಪ್ಪ, ರಾಯಚೂರು
ನೃತ್ಯ: ವಿದುಷಿ ಲಲಿತಾ ರಾವ್,
ಆಡಳಿತ ಕ್ಷೇತ್ರ: ಎಸ್ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)
ವೈದ್ಯಕೀಯ ಕ್ಷೇತ್ರ: ಡಾ.ಜೆ.ಬಿ. ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ.ಲಕ್ಷ್ಮಣ ಹನುಮಂತಪ್ಪ ಬಿದರಿ
ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.
ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್ಆರ್ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು,
ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್
ಪರಿಸರ: ಆಲ್ಮಿತ್ರಾ ಪಟೇಲ್
ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ
ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶಿ
ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್
ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯೆ ಬಾಲರಾಮನ ಶಿಲ್ಪಿ)
ವಿಜ್ಞಾನ-ತಂತ್ರಜ್ಞಾನ: ಪ್ರೊ. ಟಿ.ವಿ. ರಾಮಚಂದ್ರ, ಸುಬ್ಬಯ್ಯ ಅರುಣನ್
ಸಹಕಾರ: ವಿರೂಪಾಕ್ಷಪ್ಪ ನೇಕಾರ
ಬಯಲಾಟ: ಸಿದ್ಧಪ್ಪ ಕರಿಯಪ್ಪ(ಅಂಧ ಕಲಾವಿದ), ನಾರಾಯಣಪ್ಪ ಶಿಳ್ಳೇಕ್ಯಾತ
ಯಕ್ಷಗಾನ : ಕೇಶವ್ ಹೆಗಡೆ, ಸೀತಾರಾಮ ತೋಳ್ಪಾಡಿ
ರಂಗಭೂಮಿ: ಸರಸ್ವತಿ ಜುಲೈಕ ಬೇಗಂ, ಓಬಳೇಶ್ ಹೆಚ್.ಬಿ., ಭಾಗ್ಯಶ್ರೀ ರವಿ, ಡಿ. ರಾಮು, ಜನಾರ್ಧನ್ ಹೆಚ್., ಹನುಮಾನದಾಸ ವ. ಪವಾರ.
ಸಾಹಿತ್ಯ: ಬಿ.ಟಿ. ಲಿಲಿತಾ ನಾಯಕ್ , ಅಲ್ಲಮಪ್ರಭು ಬೆಟ್ಟದೂರು. ಡಾ. ಎಂ. ವೀರಪ್ಪ ಮೊಯಿಲಿ. ಹನುಮಂತರಾವ್ ದೊಡ್ಡಮನಿ, ಡಾ. ಬಾಳಾಸಾಹೇಬ್ ಲೋಕಾಪುರ, ಬೈರಮಂಗಲ ರಾಮೇಗೌಡ. ಡಾ. ಪ್ರಶಾಂತ್ ಮಾಡ್ತಾ
ಶಿಕ್ಷಣ: ಡಾ. ವಿ. ಕಮಲಮ್ಮ, ಡಾ. ರಾಜೇಂದ್ರ ಶೆಟ್ಟಿ., ಡಾ. ಪದ್ಮಾ ಶೇಖರ್
ಕ್ರೀಡೆ: ಜೂಡ್ ಫೆಲಿಕ್ಸ್ ಸೆಬಾಸ್ಟಿಯನ್, ಗೌತಮ್ ವರ್ಮ, ಆರ್. ಉಮಾದೇವಿ
ನ್ಯಾಯಾಂಗ: ಬಾಲನ್
ಚಿತ್ರಕಲೆ: ಪ್ರಭು ಹರಸೂರು
ಕರಕುಶಲ: ಚಂದ್ರಶೇಖರ ಸಿರಿವಂತೆ
ಈ ಸುದ್ದಿಯನ್ನೂ ಓದಿ | Kannada Rajyotsava: ಕನ್ನಡ, ಕನ್ನಡಿಗರನ್ನು ಹೀಯಾಳಿಸಿದರೆ ಕಠಿಣ ಕ್ರಮ; ಸಿಎಂ ಖಡಕ್ ಎಚ್ಚರಿಕೆ