Thursday, 19th December 2024

Raktha Kashmira Movie: ʼರಕ್ತ ಕಾಶ್ಮೀರʼ ಚಿತ್ರದಲ್ಲಿ ಭಯೋತ್ಪಾದಕರನ್ನು ದಮನಿಸಿದ ನಾಯಕ – ನಾಯಕಿ!

Raktha Kashmira Movie

ಬೆಂಗಳೂರು: MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ರಮ್ಯ (Ramya) ಮುಖ್ಯಪಾತ್ರದಲ್ಲಿ ನಟಿಸಿರುವ ʼರಕ್ತ ಕಾಶ್ಮೀರʼ ಚಿತ್ರದಲ್ಲಿ (Raktha Kashmira Movie) ಶೀರ್ಷಿಕೆಯೇ ತಿಳಿಸುವಂತೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಕಥಾಹಂದರ ಹೊಂದಿದೆ‌‌‌.

Raktha Kashmira Movie

ಪಾಕ್ ಆಕ್ರಮಿತ ಉಗ್ರಗಾಮಿಗಳು ಕಾಶ್ಮೀರದಲ್ಲಷ್ಟೇ ಅಲ್ಲ. ಬೆಂಗಳೂರು ಸೇರಿದಂತೆ ಭಾರತದ ವಿವಿಧ ನಗರಗಳಲ್ಲೂ ದಾಳಿ ನಡೆಸಿ ಸಾವಿರಾರು ಅಮಾಯಕರನ್ನು ಹತ್ಯೆ ಮಾಡಿರುತ್ತಾರೆ. ಇದರಿಂದ ನೊಂದ ಚಿತ್ರದ ನಾಯಕ ಹಾಗೂ ನಾಯಕಿ ಬೆಂಗಳೂರಿನಿಂದ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಗಿ ಅಲ್ಲಿರುವ ಉಗ್ರರನ್ನು ಮಟ್ಟಹಾಕುವ ಸನ್ನಿವೇಶವನ್ನು ಈ ಚಿತ್ರದಲ್ಲಿ ಚಿತ್ರಿಸಿಕೊಳ್ಳಲಾಗಿದೆ. ಜತೆಗೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಈ ಚಿತ್ರದಲ್ಲಿ ಬಳಸಿಕೊಂಡಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Feather Accessories Fashion: ಯುವತಿಯರನ್ನು ಸೆಳೆಯುತ್ತಿದೆ ಫಂಕಿ ಫೆದರ್ ಆಕ್ಸೆಸರೀಸ್!

ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರೆ ʼರಕ್ತ ಕಾಶ್ಮೀರʼ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ಎಂ.ಎಸ್. ರಮೇಶ್ ಅವರದು. ಗುರುಕಿರಣ್ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ, ರಮ್ಯ, ದೊಡ್ಡಣ್ಣ, ಓಂಪ್ರಕಾಶ್ ರಾವ್, ಅನಿಲ (ತೆಲುಗು ನಟಿ), ಕುರಿ ಪ್ರತಾಪ್ ಮುಂತಾದವರಿದ್ದಾರೆ.