Wednesday, 4th December 2024

Raktha Kashmira Movie: ಉಪೇಂದ್ರ-ರಮ್ಯಾ ಕಾಂಬಿನೇಷನ್‌ನಲ್ಲಿ ಶೀಘ್ರವೇ ತೆರೆಗೆ ಬರಲಿದೆ ‘ರಕ್ತ ಕಾಶ್ಮೀರ’

Raktha Kashmira Movie

ಬೆಂಗಳೂರು: MDM ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ಹಾಗೂ ರಿಯಲ್ ಸ್ಟಾರ್ ಉಪೇಂದ್ರ (Upendra) ಹಾಗೂ ರಮ್ಯಾ (Ramya) ಮುಖ್ಯಪಾತ್ರದಲ್ಲಿ ನಟಿಸಿರುವ ‘ರಕ್ತ ಕಾಶ್ಮೀರ’ ಚಿತ್ರ (Raktha Kashmira Movie) ತೆರೆಗೆ ಬರಲು ಅಣಿಯಾಗಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.

ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ.‌ ಇದೇ ಚಿತ್ರದ ಪ್ರಮುಖ ಕಥಾಹಂದರವಾಗಿದೆ. ಗಡಿ ಪ್ರದೇಶ ಅಷ್ಟೇ ಅಲ್ಲ. ಬೆಂಗಳೂರಿನಲ್ಲೂ ಉಗ್ರಗಾಮಿಗಳ ಕಾಟವಿದೆ. ಅದರ ನಿರ್ಮೂಲನೆಗೆ‌ ಸಂಬಂಧಿಸಿದ ಕಥಾವಸ್ತುವನ್ನೂ ಈ ಚಿತ್ರ ಹೊಂದಿದೆ. ‌

ಈ ಸುದ್ದಿಯನ್ನೂ ಓದಿ | Suryakanti Jumki Fashion: ಹುಡುಗಿಯರನ್ನು ಸೆಳೆದ 3 ಬಗೆಯ ಸೂರ್ಯಕಾಂತಿ ಜುಮಕಿಗಳಿವು

ಎಸ್.ವಿ. ರಾಜೇಂದ್ರಸಿಂಗ್ ಬಾಬು ಅವರೇ ʼರಕ್ತ ಕಾಶ್ಮೀರʼ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದು, ಸಂಭಾಷಣೆ ಎಂ.ಎಸ್. ರಮೇಶ್ ಅವರದು. ಗುರುಕಿರಣ್ ಸಂಗೀತ ನಿರ್ದೇಶನದ ಈ ಚಿತ್ರದಲ್ಲಿ ಉಪೇಂದ್ರ, ರಮ್ಯ, ದೊಡ್ಡಣ್ಣ, ಓಂಪ್ರಕಾಶ್ ರಾವ್, ಅನಿಲ (ತೆಲುಗು ನಟಿ), ಕುರಿ ಪ್ರತಾಪ್ ಮುಂತಾದವರಿದ್ದಾರೆ.