Thursday, 12th December 2024

ಅಂತಾರಾಜ್ಯ ಜಲವಿವಾದ ಕುರಿತ ದಾವೆ: ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಸಭೆ

ಬೆಳಗಾವಿ: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿರುವ ಅಂತಾರಾಜ್ಯ ಜಲವಿವಾದಗಳಿಗೆ ಸಂಬಂಧಿಸಿದ ದಾವೆಗಳ ಕುರಿತಂತೆ ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರ ಸಭೆ ವಿಕಾಸಸೌಧದಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಪ್ರಾರಂಭವಾಯಿತು.

ಸಭೆಯಲ್ಲಿ ಗೃಹ ಮತ್ತು ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಸರ್ಕಾರದ ಅಪರ‌ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್ ಕುಮಾರ್ ಹಾಗೂ ಸರ್ವೋಚ್ಚ ನ್ಯಾಯಾಲಯದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಹಿರಿಯ ವಕೀಲರಾದ ಮೋಹನ್ ಕಾತರಕಿ, ನಿಶಾಂತ್ ಪಾಟೀಲ್, ರಘುಪತಿ, ಅಶ್ವಿನ್ ಚಿಕ್ಕಮಠ್ ಸೇರಿದಂತೆ ವಕೀಲರ ತಂಡ ಸೇರಿದಂತೆ ಹಿರಿಯ ಅಧಿಕಾರಿಗಳು, ಅಂತಾರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದ ತಾಂತ್ರಿಕ ಸಲಹೆಗಾರರು, ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರುಗಳು ಮಹತ್ವಯುತ ಈ ಸಭೆಯಲ್ಲಿ ಭಾಗವಹಿಸಿದರು.