ಬೆಂಗಳೂರು : ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಕಣಗಾಲ್ ಅವರ ಆರೋಗ್ಯ ಕಳೆದ ಕೆಲವು ದಿನಗಳಿಂದ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ರಾಮು ಕಣಗಾಲ್ ತಮ್ಮ ವಿದ್ಯಾಭ್ಯಾಸವನ್ನು ಚೆನ್ನೈ ಮುಗಿಸಿದ್ದು, ನಂತರ ಬೆಂಗಳೂರಿನಲ್ಲಿ ಕಣಗಾಲ್ ನೃತ್ಯಾಲಯ ಹೆಸರಿನಲ್ಲಿ ನಾಟ್ಯಶಾಲೆ ನಡೆಸುತ್ತಿದ್ದರು.