ಬೆಂಗಳೂರು :ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ (Vinay Kulkarni) ವಿರುದ್ಧ ಬೆಂಗಳೂರಿನಲ್ಲಿ ಅತ್ಯಾಚಾರ ಕೇಸ್ ದಾಖಲಾಗಿದೆ. ರೈತ ಮುಖಂಡೆ ತಮ್ಮ ಮೇಲೆ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ನಗರದ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೂರು ನೀಡಿದ ಮಹಿಳೆ, ಶಾಸಕ ವಿನಯ್ ಕುಲಕರ್ಣಿ ಅವರು 2022 ರಿಂದ ನನಗೆ ಪರಿಚಯ. ಆಗಾಗ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ಮಾತನಾಡುತ್ತಿದ್ದರು. ವಿಡಿಯೋ ಕಾಲ್ನಲ್ಲಿ ಬೆತ್ತಲಾಗಲು ಹೇಳುತ್ತಿದ್ದರು. ಅದೇ ರೀತಿ ಅವರು ಮನೆಗೆ ಕರೆಸಿಕೊಂಡಿದ್ದರು. 2022ರ ಆಗಸ್ಟ್ 24 ರಂದು ಸಂಜೆ 4 ಗಂಟೆಗೆ ಆಟೋದಲ್ಲಿ ಅವರ ಮನೆಗೆ ಹೋಗಿದ್ದೆ. ಈ ವೇಳೆ ಅತ್ಯಾಚಾರ ನಡೆದಿದೆ ಎಂದು ದೂರಿದ್ದಾರೆ.
ತಮ್ಮ ಮನೆಯಿಂದ ಕಾರಿನಲ್ಲಿ ಹೊರಗೆ ಬಂದ ಬಂದ ವಿನಯ್ ಕುಲಕರ್ಣಿ ಒಳಗೆ ಕುಳಿತುಕೊಳ್ಳುವಂತೆ ಹೇಳಿದ್ದರು. ಬಳಿಕ ದೇವನಹಳ್ಳಿ ಸಮೀಪದ ಐವಿಸಿ ರೋಡ್ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದರು. ಸಂಜೆಯಾದ ಬಳಿಕ ಹಿಂದಿನ ಸೀಟ್ನಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬಳಿಕ ಅಕ್ಟೋಬರ್ 2 ರಂದು ಗಾಂಧಿ ಜಯಂತಿಯಂದೂ ತಮ್ಮ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆ ದೂರಿದ್ದಾರೆ.
ಇದನ್ನೂ ಓದಿ: Relationship Tips: ನಿಮ್ಮ ಸಂಬಂಧವನ್ನು ಬಲಪಡಿಸಲು 2: 2: 2 ತಂತ್ರ ಬಳಸಿಕೊಳ್ಳಿ!
ಸಂತ್ರಸ್ತೆ ನೀಡಿದ ದೂರಿನ ಅನ್ವಯ ವಿನಯ್ ಕುಲಕರ್ಣಿ ವಿರುದ್ಧ ಅತ್ಯಾಚಾರ, ಕಿರುಕಿಳ, ಜೀವ ಬೆದರಿಕೆ, , ವಂಚನೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಸದ್ಯ ದೂರು ನೀಡಿದ ಮಹಿಳೆಯನ್ನು ವೈದ್ಯಕೀಯ ತಪಾಸಣೆಗಾಗಿ ಕೆ ಸಿ ಜನರಲ್ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.