Sunday, 8th September 2024

4 ದಿನ ಭಾರಿ ಮಳೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದ್ದು, 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಯೆ ಆರೆಂಜ್ ಅಲರ್ಟ್, ರಾಮನಗರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆದೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇನ್ನು ಕೆಲವೆಡೆ ರಸ್ತೆಗಳು ಜಲಾವೃತವಾಗಿದ್ದು, ರಸ್ತೆ ಸಂಚಾರ ಅಸ್ಥವ್ಯಸ್ಥವಾಗಿದೆ. ಜೊತೆಗೆ ಹಲವೆಡೆ ಭಾರಿ ಮಳೆಗೆ ಮನೆಗಳು ಕುಸಿದಿವೆ.

Leave a Reply

Your email address will not be published. Required fields are marked *

error: Content is protected !!