ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ (Renuka swamy murder case) ಪ್ರಕರಣದಲ್ಲಿ ಬಂಧಿತರಾಗಿ ಜೈಲಿನಲ್ಲಿರುವ ನಾಲ್ವರು ಆರೋಪಿಗಳ ಜಾಮೀನು ಅರ್ಜಿ (Bail plea) ವಿಚಾರಣೆ ಇಂದು ನಡೆಯಲಿದೆ. ಹೈಕೋರ್ಟ್ನ (Karnataka High court) ಏಕಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ.
ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ (Pavithra Gowda), ಅನುಕುಮಾರ್ ಸೇರಿ ನಾಲ್ವರು ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಪವಿತ್ರಾ ಗೌಡ ಮೊದಲ ಆರೋಪಿ ಆಗಿದ್ದಾಳೆ. ಇವರ ಜಾಮೀನು ಅರ್ಜಿಯನ್ನು ಸೆಷನ್ಸ್ ಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು. ನಂತರ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ಗೆ ಹೋಗಿದ್ದರು.
ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ಗೆ (Actor Darshan) ಈಗಾಗಲೇ ಜಾಮೀನು ದೊರೆತಿದೆ. ಬೆನ್ನು ನೋವಿಗೆ ಸರ್ಜಿಕಲ್ ಚಿಕಿತ್ಸೆ ಅಗತ್ಯವಿರುವುದರಿಂದ ಜಾಮೀನು ನೀಡಬೇಕು ಎಂದು ದರ್ಶನ್ ವಕೀಲರು ವಾದಿಸಿದ್ದರು. ಹೀಗಾಗಿ, ಚಿಕಿತ್ಸೆಗಾಗಿ ಹೈಕೋರ್ಟ್ 6 ವಾರಗಳ ಜಾಮೀನು ನೀಡಿದೆ. ದರ್ಶನ್ ಅವರು ಬೆಂಗಳೂರಿನ ನ್ಯಾಯಾಲಯದ ವ್ಯಾಪ್ತಿಯಲ್ಲಿರುವ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಇದನ್ನೂ ಓದಿ: Actor Darshan: ಜೀವ ಬೆದರಿಕೆ; ನಟ ದರ್ಶನ್, ಅಭಿಮಾನಿಗಳ ವಿರುದ್ಧ ಲಾಯರ್ ಜಗದೀಶ್ ದೂರು