Thursday, 12th December 2024

Road Accident: ಕನಕಪುರದಲ್ಲಿ ಭೀಕರ ಅಪಘಾತ; ಕಾರು-ಲಾರಿ ಡಿಕ್ಕಿಯಾಗಿ ಮೂವರ ದುರ್ಮರಣ

Road Accident

ರಾಮನಗರ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಯುವಕರು ದುರ್ಮರಣ ಹೊಂದಿರುವುದು (Road Accident) ಜಿಲ್ಲೆಯ ಕನಕಪುರ ತಾಲೂಕಿನ ಹುಲಿಬೆಲೆ ಬಳಿ ಶನಿವಾರ ನಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮೂವರ ದೇಹಗಳು ಕಾರಿನಲ್ಲಿಯೇ ಛಿದ್ರವಾಗಿವೆ.

ಸಂಗಮದಿಂದ ಕನಕಪುರ ಕಡೆಗೆ ಬರುತ್ತಿದ್ದ ಕಾರು ಹಾಗೂ ಸಂಗಮದ ಕಡೆ ತೆರಳುತ್ತಿದ್ದ ಸರಕು ಲಾರಿ ನಡುವೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಕನಕಪುರ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕನಕಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | jammu and Kashmir: ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕರನ್ನು ಬಲಿ ಪಡೆದ ಭದ್ರತಾ ಪಡೆ!

ಪತ್ನಿ, 4 ವರ್ಷದ ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

Self Harming

ಮಂಗಳೂರು: ಪತ್ನಿ ಹಾಗೂ 4 ವರ್ಷದ ಮಗನನ್ನು ಕೊಂದು ವ್ಯಕ್ತಿಯೊಬ್ಬ ಬಳಿಕ ತಾನೂ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು (Self Harming) ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ. ಶುಕ್ರವಾರ ಪತ್ನಿ ಮತ್ತು ಮಗನನ್ನು ಕೊಂದು ನಂತರ ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾರ್ತಿಕ್ ಭಟ್ (32) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮುಲ್ಕಿ ತಾಲೂಕಿನ ಪಕ್ಷಿಕೆರೆಯ ಫ್ಲಾಟ್‌ನಲ್ಲಿ ಈತ, ಪತ್ನಿ ಪ್ರಿಯಾಂಕಾ (28), ಪುತ್ರ ಹೃದಯ್ (4)ನನ್ನು ಭೀಕರವಾಗಿ ಕೊಲೆ ಮಾಡಿದ ಬಳಿಕ, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡಿರುವ ಕಾರ್ತಿಕ್ ಫ್ಲ್ಯಾಟ್ ಬಳಿಗೆ ಪೊಲೀಸರು ಬಂದಾಗ ಪತ್ನಿ ಹಾಗೂ ಪುತ್ರನ ಶವ ಪತ್ತೆಯಾಗಿದೆ. ಪತ್ನಿ ಹಾಗೂ ಪುತ್ರನ ಕೊಂದು ಕಾರ್ತಿಕ್‌ ಯಾಕೆ ಆತ್ಮಹತ್ಯೆ ಮಾಡಿಕೊಂಡ ಎಂಬುದರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಕೌಟುಂಬಿಕ ಸಮಸ್ಯೆಯಿಂದ ಪತ್ನಿ ಮತ್ತು ಮಗನನ್ನು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಮುಲ್ಕಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನೂ ಓದಿ | Tipu Jayanti: ಟಿಪ್ಪು ಜಯಂತಿ ಹಿನ್ನೆಲೆ ನಾಳೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ; ಸರ್ಕಾರದ ವಿರುದ್ಧ ಮುಸ್ಲಿಂರ ಆಕ್ರೋಶ