Saturday, 27th July 2024

ಆ‍ರ್‌.ಆರ್‌ ನಗರ ವಿಧಾನಸಭೆ ಕ್ಷೇತ್ರ: ಅ.8 ರಂದು ಜೆಡಿಎಸ್‌ ಅಭ್ಯರ್ಥಿ ಘೋಷಣೆ

ಬೆಂಗಳೂರು: ಇದೇ ತಿಂಗಳ ಅ.8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಹೇಳಿದ್ದಾರೆ.

ನಗರದ ಜೆ.ಪಿ.ಭವನದಲ್ಲಿ ನಡೆದ ವಿಧನಾಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ ಕೊಳ್ಳುವ ನಿಟ್ಟಿನಲ್ಲಿ ತಂತ್ರ ರೂಪಿಸುವ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ಅಭ್ಯರ್ಥಿಗಳು,ಆಯಾ ಕ್ಷೇತ್ರಗಳ ಮುಖಂಡರು, ಶಾಸಕರು ಸೇರಿದಂತೆ ಇತರರೊಂದಿಗೆ ಸಮಾಲೋಚನೆ ನಡೆಸಿದರು.

ಇದೇ ವೇಳೆ ಉಪ ಚುನಾವಣೆ ಕುರಿತು ಮಾತನಾಡಿದ ದೇವೇಗೌಡರು, ‘ಆರ್.ಆರ್.ನಗರ ಕ್ಷೇತ್ರ ದಲ್ಲಿಯೂ ಜೆಡಿಎಸ್ ಅಭ್ಯರ್ಥಿ ಯನ್ನು ಕಣಕ್ಕಿಳಿಸುತ್ತೇವೆ. ಈಗಾಗಲೇ ಮೂವರ ಹೆಸರು ಅಂತಿಮವಾಗಿದ್ದು, ಅದರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗುವುದು. ಸೋಲು-ಗೆಲುವು ಬೇರೆ ವಿಚಾರ. ಅಭ್ಯರ್ಥಿಯನ್ನಂತೂ ಕಣಕ್ಕಿಳಿಸುವುದು ಖಚಿತವೆಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!