Tuesday, 19th November 2024

SC on Karnataka Board Exams : ಅರ್ಧ ವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ

SC on Karnataka Board Exams

ಬೆಂಗಳೂರು : ಕರ್ನಾಟಕ ಸರ್ಕಾರ ನಾನಾ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು (SC on Karnataka Board Exams) ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂಬ ಅಂಶವನ್ನು ಪರಿಗಣಿಸಿರುವ ಸುಪ್ರೀಂ ಕೋರ್ಟ್‌ ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ತಡೆ ನೀಡಿದೆ. ಈ ವೇಳೆ ಸರ್ಕಾರದ ಕ್ರಮವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ನ್ಯಾಯಪೀಠವು, ಪರೀಕ್ಷೆ ನಡೆಯದೇ ಇದ್ದ ಜಿಲ್ಲೆಯಗಳಲ್ಲಿ ಯಥಾ ಸ್ಥಿತಿ ಮುಂದುವರಿಸಲು ಹೇಳಿದೆ.

ನೀವು ವಿದ್ಯಾರ್ಥಿಗಳಿಗೆ ಏಕೆ ಕಿರುಕುಳ ನೀಡುತ್ತಿದ್ದೀರಿ? ನೀವು ಈ ರೀತಿ ವರ್ತಿಸಬಾರದು. ಇದನ್ನು ಅಹಂಕಾರ ಎಂದು ಪರಿಗಣಿಸಬಾರದು. ನಿಮಗೆ ನಿಜವಾಗಿಯೂ ವಿದ್ಯಾರ್ಥಿಗಳ ಕಲ್ಯಾಣದ ಬಗ್ಗೆ ಕಾಳಜಿ ಇದ್ದರೆ, ದಯವಿಟ್ಟು ಉತ್ತಮ ಶಾಲೆಗಳನ್ನು ತೆರೆಯಿರಿ. ಅವರನ್ನು ಒತ್ತಡದಲ್ಲಿ ಸಿಲುಕಿಸಬೇಡಿ” ಎಂದು ಕರ್ನಾಟಕ ಸರ್ಕಾರದ ಪರವಾಗಿ ಹಾಜರಾದ ಹಿರಿಯ ವಕೀಲ ದೇವದತ್ ಕಾಮತ್ ಅವರಿಗೆ ಸುಪ್ರೀಂ ಕೋರ್ಟ್‌ ಸಲಹೆ ನೀಡಿದೆ.

ಇದನ್ನೂ ಓದಿ : Kichcha Sudeep on Mother : ಅಮ್ಮನ ಅಗಲಿಕೆ ಕುರಿತು ಭಾವುಕ ಸಂದೇಶ ಬರೆದ ಕಿಚ್ಚ ಸುದೀಪ್‌

ಈ ವೇಳೆ ವಕೀಲರು, ರಾಜ್ಯದ ಏಳು ಗ್ರಾಮೀಣ ಜಿಲ್ಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 5, 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸುತ್ತೋಲೆ ಹಿಂತೆಗೆದುಕೊಂಡಿದೆ ಎಂದು ಹೇಳಿದರು. 24 ಜಿಲ್ಲೆಗಳಲ್ಲಿ ಪರೀಕ್ಷೆ ನಡೆಸಲಾಗಿದೆ ಎಂದು ಉನ್ನತ ನ್ಯಾಯಾಲಯಕ್ಕೆ ತಿಳಿಸಿದರು.

ಮೇಲ್ಮನವಿ ವಿಚಾರಣೆ

ಪರೀಕ್ಷೆಯ ನಿಖರವಾದ ವಿವರಗಳ ಬಗ್ಗೆ ನಾಲ್ಕು ವಾರಗಳಲ್ಲಿ ಅಫಿಡವಿಟ್ ಸಲ್ಲಿಸುವಂತೆ ಅದು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಕರ್ನಾಟಕ ಹೈಕೋರ್ಟ್ ಮಾರ್ಚ್ 22ರಂದು ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.

2023-24ರ ಶೈಕ್ಷಣಿಕ ವರ್ಷಕ್ಕೆ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಹೈಕೋರ್ಟ್‌ನ ವಿಭಾಗೀಯ ಪೀಠವು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿತ್ತು.

ಕರ್ನಾಟಕ ರಾಜ್ಯ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಮೂಲಕ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ರಾಜ್ಯ ಸರ್ಕಾರದ ಅಕ್ಟೋಬರ್ 2023 ರ ನಿರ್ಧಾರವನ್ನು ಹೈಕೋರ್ಟ್‌ ರದ್ದು ಮಾಡಿತ್ತು.