ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ (Scholarship), ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಂದ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ವೆಬ್ ಸೈಟ್ www.sw.kar.nic.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.
ಈ ಸುದ್ದಿಯನ್ನೂ ಓದಿ | Pralhad Joshi: ಪಿಎಂ ಕಿಸಾನ್ ಸಮ್ಮಾನ್; ರಾಜ್ಯದ 47.12 ಲಕ್ಷ ರೈತರಿಗೆ 942 ಕೋಟಿ ರೂ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.20/1, 1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು. ದೂರವಾಣಿ ಸಂಖ್ಯೆ: 080-22240449, 9480843019. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು, ದೂರವಾಣಿ ಸಂಖ್ಯೆ: 080-28461351, 9480843051. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು. ದೂರವಾಣಿ ಸಂಖ್ಯೆ: 080-29711096, 9480843050. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲ್ಲೂಕು, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು. ದೂರವಾಣಿ ಸಂಖ್ಯೆ: 080-29535045, 9480843049. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಆನೇಕಲ್, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್, ಬಸ್ಟಾಂಡ್ ಹಿಂಭಾಗ, ಬೆಂಗಳೂರು, ದೂರವಾಣಿ ಸಂಖ್ಯೆ:080-27859557, 9480843052 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.