Saturday, 14th December 2024

Scholarship: ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನ

Scholarship

ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸ್‌ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ಅಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ (Scholarship) ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ

ಇನ್ನು ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ನೀಡಲೂ ಅರ್ಜಿ ಆಹ್ವಾನಿಸಲಾಗಿದೆ. ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಮಕ್ಕಳಿಗೆ ಈ ಈ ವಿದ್ಯಾರ್ಥಿವೇತನ ದೊರೆಯಲಿದೆ. ಅರ್ಹ ವಿದ್ಯಾರ್ಥಿಗಳು ವೆಬ್ ಸೈಟ್ www.sw.kar.nic.inನಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ನಂ.20/1, 1ನೇ ಮಹಡಿ, ಜೆಲ್ಲೇಟಾ ಟವರ್, ಮಿಷನ್ ರಸ್ತೆ, ಸಂಪಂಗಿರಾಮನಗರ, ಬೆಂಗಳೂರು. ದೂರವಾಣಿ ಸಂಖ್ಯೆ: 080-22240449, 9480843019. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಉತ್ತರ ತಾಲ್ಲೂಕು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪಕ್ಕ, ಯಲಹಂಕ, ಬೆಂಗಳೂರು, ದೂರವಾಣಿ ಸಂಖ್ಯೆ: 080-28461351, 9480843051. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು. ದೂರವಾಣಿ ಸಂಖ್ಯೆ: 080-29711096, 9480843050. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಪೂರ್ವ ತಾಲೂಕು, ಟಿ.ಸಿ ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು. ದೂರವಾಣಿ ಸಂಖ್ಯೆ: 080-29535045, 9480843049. ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಆನೇಕಲ್, ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್, ಬಸ್ಟಾಂಡ್ ಹಿಂಭಾಗ, ಬೆಂಗಳೂರು, ದೂರವಾಣಿ ಸಂಖ್ಯೆ:080-27859557, 9480843052 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Scholarship: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ಪರೀಕ್ಷೆ