Thursday, 12th December 2024

ನಾಳೆಯಿಂದ ತರಗತಿ ಆರಂಭ, ವಿವಿಧ ಕಾಲೇಜುಗಳಿಗೆ ಸಚಿವರ ಭೇಟಿ

ಬೆಂಗಳೂರು: ಹೊಸ ವರ್ಷ ಜನವರಿ 1 ರಿಂದ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ನಗರದ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸವನಗುಡಿಯ ಬಿಎಂಎಸ್ ಕಾಲೇಜು, ಜಯನಗರದ ನ್ಯಾಷನಲ್ ಕಾಲೇಜು, ವಿಜಯಾ ಕಾಲೇಜು, ಎನ್‍ಎಂಕೆಆರ್‍ವಿ ಕಾಲೇಜು ಹಾಗೂ ಆರ್‍ವಿ ಕಾಲೇಜುಗಳಿಗೆ ಭೇಟಿ ನೀಡಿ ಕಾಲೇಜುಗಳ ಆರಂಭಕ್ಕೆ ಮಾಡಿಕೊಂಡಿ ರುವ ಸಿದ್ಧತೆಯನ್ನು ಸಚಿವರು ಖುದ್ದು ಪರಿಶೀಲನೆ ಮಾಡಿದರು.

ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮಾರ್ಗಸೂಚಿಯಂತೆ, ಪ್ರಸ್ತುತ ಶೈಕ್ಷಣಿಕ ವರ್ಷದ 10 ಮತ್ತು 12ನೆ ತರಗತಿ ಆರಂಭದ ಸಿದ್ಧತೆಯನ್ನು ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಮಾರ್ಗ ಸೂಚಿಯಂತೆ ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುವ ಬಗ್ಗೆ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.