ಸದ್ಯಕ್ಕೆ ರಾಜ್ಯಾಧ್ಯಂತ ಶಾಲಾ-ಕಾಲೇಜುಗಳು ನಿಗಧಿತ ಶೈಕ್ಷಣಿಕ ವೇಳಾಪಟ್ಟಿಯಂತೆ ಆರಂಭಗೊಳ್ಳಲಿವೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಸಲಹೆ ಆಧರಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ. ಜೂನ್, ಜುಲೈ ನಲ್ಲಿ ಕೋವಿಡ್ ತೀವ್ರತೆ ಹೆಚ್ಚಳವಾಗಲಿದೆ ಎಂಬುದಾಗಿ ಸಲಹೆ ಮಾಡಿದ್ದಾರೆ ಎಂದರು.
ಶಿಕ್ಷಣ ಇಲಾಖೆಯಿಂದ ಶಾಲೆಗೆ ನೋಟಿಸ್ ಜಾರಿಗೊಳಿಸಲಾಗಿದೆ. ಸಿಬಿಎಸ್‌ಇಗೂ ಪತ್ರ ಬರೆಯಲಾಗುತ್ತದೆ. ಧರ್ಮದ ಹೆಸರಿನಲ್ಲಿ ಒಡಕು ಸರಿಯಲ್ಲ ಎಂದರು. ಎಸ್ ಎಸ್ ಎಲ್ ಸಿ ಮೌಲ್ಯ ಮಾಪನ ಆರಂಭಗೊಂಡಿದೆ. ದ್ವಿತೀಯ ಪಿಯುಸಿಯ ಪರೀಕ್ಷಾ ಫಲಿತಾಂಶವನ್ನು ಮೇ 2ನೇ ವಾರದಲ್ಲಿ ಪ್ರಕಟಿಸ ಲಾಗುತ್ತದೆ ಎಂದು ತಿಳಿಸಿದರು.