Saturday, 7th September 2024

ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಜೂನ್ 3 ನೇ ವಾರದಲ್ಲಿ ಪ್ರಕಟಿಸಲು ಗುರಿ ಹೊಂದಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಟ್ವೀಟ್ ಮಾಡಿರುವ ಸಚಿವ ಬಿ.ಸಿ.ನಾಗೇಶ್, ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರ ಮೌಲ್ಯಮಾಪನ ಆರಂಭ ವಾಗುತ್ತದೆ. ಜೂನ್ 15 ಕ್ಕೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ, ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

2022ರ ಏಪ್ರಿಲ್, ಮೇ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮೇ 18ರಂದು ನಿಗದಿ ಪಡಿಸಿದ್ದ ವೇಳಾಪಟ್ಟಿಯಂತೆ ಮುಕ್ತಾಯ ವಾಗಿದ್ದು, ಜೂನ್ 3 ನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

error: Content is protected !!