Saturday, 7th September 2024

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು : ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ ಫಲಿತಾಂಶ ನೋಡಬಹುದು.

ಮಲ್ಲೇಶ್ವರಂನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಸಚಿವ ಬಿ.ಸಿ.ನಾಗೇಶ್ ದ್ವಿತೀಯ ಪಿಯುಸಿ ಫಲಿತಾಂಶದ ಬಗ್ಗೆ ವಿವರಣೆ ನೀಡಿದ್ದು, ಈ ಬಾರಿ 61.88 ರಷ್ಟು ಮಕ್ಕಳು ಉತ್ತಿರ್ಣರಾಗಿದ್ದಾರೆ. ಒಟ್ಟು 599,794 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 402,697 ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಫಲಿತಾಂಶ ನೋಡುವ ವಿಧಾನ

1. ದ್ವೀತಿಯ ಪಿಯು ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ kseeb.kar.nic.in, pue.kar.nic.in ಅಥವಾ karresults.nic.in ಗೆ ಭೇಟಿ ನೀಡಿ.
2. ಬಳಿಕ ನಿಮಗೆ ನಿಮ್ಮ ಮುಂದೆ ಓಪನ್ ಆದ ಪೇಜ್ ಕಾಣಿಸಿಕೊಳ್ಳುತ್ತದೆ, ಇಲ್ಲಿ ನಿಮಗೆ ಕಾಣಿಸುವ ಪಿಯುಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ . ಆಗ ನಿಮಗೆ ಇನ್ನೊಂದು ಪೇಜ್ ಓಪನ್ ಆಗುತ್ತದೆ
3. ಓಪನ್ ಆದ ವೆಬ್ ಪೇಜ್ನಲ್ಲಿ ದ್ವೀತಿಯ ಪಿಯು ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಟೈಪ್ ಮಾಡಿ. ನಂತರ ‘Submit’ ಬಟನ್ನಲ್ಲಿ .
4. ಈಗ ನಿಮಗೆ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ. ಅದನ್ನು ಡೌನ್ಲೋಡ್ ಮಾಡಿಕೊಂಡು, ನಿಮ್ಮ ಮುಂದಿನ ಸಂಪರ್ಕ ಕ್ಕಾಗಿ ಪ್ರಿಂಟ್ ತೆಗೆದುಕೊಂಡರೆ ಒಳಿತು.

error: Content is protected !!