Thursday, 12th December 2024

ಇಂದು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಖಾಸಗಿ ಅಭ್ಯರ್ಥಿಗಳು ಹಾಗೂ ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ಸೋಮವಾರ 10.30ಕ್ಕೆ ಪ್ರಕಟಗೊಳ್ಳಲಿದೆ.

ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಫಲಿತಾಂಶ ಪ್ರಕಟಿಸಲಿದ್ದು karresults.nic.in ಲಿಂಕ್ ಮೂಲಕ ಫಲಿತಾಂಶ ನೋಡ ಬಹುದಾಗಿದೆ.

ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಮಾಹಿತಿ ನೀಡಿದ್ದು, ಆಗಸ್ಟ್-ಸೆಪ್ಟೆಂಬರ್ 2021ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡ ಖಾಸಗಿ, ಫಲಿತಾಂಶ ತಿರಸ್ಕರಿಸಿದ್ದ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ದಿನಾಂಕ 20-09-2021ರಂದು ಬೆಳಿಗ್ಗೆ 10.30 ಗಂಟೆಗೆ ಪ್ರಕಟಿಸಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

ಒಟ್ಟು 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಇದರಲ್ಲಿ 17,470 ಖಾಸಗಿ ವಿದ್ಯಾರ್ಥಿಗಳು, 351 ರಿಪೀಟರ್ಸ್, 592 ಪ್ರೆಶರ್ಸ್ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ರು. ರಾಜ್ಯದ 187 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಮಾಡಲಾಗಿತ್ತು.