Sunday, 15th December 2024

ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಯಾವುದೇ ಗೊಂದಲಗಳಿಲ್ಲ ಯಶಸ್ವಿ ಯಾಗಿತ್ತು. ದ್ವಿತೀಯ ಪಿಯುಸಿಯಲ್ಲೂ ಯಾವುದೇ ಗೊಂದಲವಿಲ್ಲದೇ ನಡೆಸಲು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದೆ.

ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿತ್ತು.

ನಮಗೆ ಹಿಜಾಬ್‌ಗಿಂತಲೂ ಪರೀಕ್ಷೆ ಮುಖ್ಯ ಪರೀಕ್ಷೆಯ ಕೊಠಡಿಗೆ ಹೋಗುವ ಮೊದಲು ಹಿಜಾಬ್ ತೆಗೆಯುತ್ತೇವೆ ಎಂದ ಮಲ್ಲೇಶ್ವರಂ ಬಾಲಕರ ಪದವಿ ಪೂರ್ವ ಕಾಲೇಜ್ ಬಳಿ ಆಸೀಯಾ ಎಂಬ ವಿದ್ಯಾರ್ಥಿ ಹೇಳಿದ್ದಾಳೆ.

ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಹೀಗಿದೆ

ಏ. 22 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಏ. 23 – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ

ಏ. 25 – ಅರ್ಥಶಾಸ್ತ್ರ

ಏ. 26 – ಮನಶ್ಶಾಸ್ತ್ರ, ರಸಾಯನ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ

ಏ. 28 – ಕನ್ನಡ

ಮೇ 4 – ಭೂಗೋಳಶಾಸ್ತ್ರ, ಜೀವಶಾಸ್ತ್ರ

ಮೇ 5 – ಮಾಹಿತಿ ತಂತ್ರಜ್ಞಾನ, ರಿಟೈಲ್ ಆಟೋಮೊಬೈಲ್, ಹೆಲ್ತ್ ಕೇರ್ ಬ್ಯೂಟಿ ಅಂಡ್ ವೆಲ್ ನೆಸ್

ಮೇ 6 – ಇಂಗ್ಲಿಷ್

ಮೇ 10 – ಇತಿಹಾಸ, ಭೌತಶಾಸ್ತ್ರ

ಮೇ 12 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಮೇ 14 – ಸಮಾಜಶಾಸ್ತ್ರ, ಗಣಕ ವಿಜ್ಞಾನ, ವಿದ್ಯುನ್ಮಾನ ಶಾಸ್ತ್ರ

ಮೇ 17 – ಐಚ್ಚಿಕ ಕನ್ನಡ, ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹವಿಜ್ಞಾನ

ಮೇ 18 – ಹಿಂದಿ

ಪರೀಕ್ಷೆ ಸಮಯ:

* ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಪರೀಕ್ಷೆ

2020-21ರಲ್ಲಿ ಕರೋನಾ ಹಿನ್ನೆಲೆ ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಗಿತ್ತು. ಈ ಶೈಕ್ಷಣಿಕ ವರ್ಷ ಎಸ್ ಎಸ್ ಎಲ್ ಸಿ ಯಂತೆ ಸರಳೀಕೃತ ಪರೀಕ್ಷೆ ನಡೆಸಲಾಗುತ್ತಿದ್ದು ವಿದ್ಯಾರ್ಥಿಗಳು ಯಾವುದೇ ಗೊಂದಲ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಶಿಕ್ಷಣ ಸಚಿವ ಬಿಸಿ ನಾಗೇಶ್ ಶುಭ ಹಾರೈಸಿದ್ದಾರೆ.