Thursday, 12th December 2024

ದ್ವಿತೀಯ ಪಿಯು ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ಯುಗಾದಿ ಹಬ್ಬದ ದಿನವೇ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ನಾಳೆಯೇ ಫಲಿತಾಂಶ ಪ್ರಕಟಗೊಳ್ಳಲಿದೆ. ಏ.10 ರಂದು ಫಲಿತಾಂಶ ಬಿಡುಗಡೆಯಾಗಲಿದೆ. ಈ ಸಂಬಂಧ ನಾಳೆ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದೆ.

https://karesults.nic.in ವೆಬ್ ಸೈಟ್ ನಲ್ಲಿ 11 ಗಂಟೆ ನಂತರ ಫಲಿತಾಂಶ ವೀಕ್ಷಿಸಬಹುದು.

ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಮಾ.25ರಿಂದಲೇ ಮೌಲ್ಯ ಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಈ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇದೆ. ವಿದ್ಯಾರ್ಥಿಗಳು ಬಯಸಿದರೆ ಮತ್ತೊಮ್ಮೆ ಪರೀಕ್ಷೆ ಬರೆಯಬಹುದು.

karresults.nic.in ಅಥವಾ pue.kar.nic ಅಧಿಕೃತ ವೆಬ್‌​ಸೈಟ್‌​ಗೆ ಭೇಟಿ ನೀಡಿ.

* ಮುಖಪುಟದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
* ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆಯೊಂದಿಗೆ ಯಾವ ವಿಭಾಗವೆಂದು ನಮೂದಿಸಿ. ವಿಜ್ಞಾನ, ವಾಣಿಜ್ಯ ಮತ್ತು ಕಲೆ ಎಂಬ ಆಯ್ಕೆಗಳಿರಲಿದ್ದು, ನಿಮ್ಮ ಕೋರ್ಸ್‌ ಯಾವುದೋ ಅದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ.
* ನಂತರ ಕ್ಲಿಕ್ ಮಾಡಿದಾಗ ನಿಮಗೆ ಫಲಿತಾಂಶವು ಸ್ಕ್ರೀನ್​​ ಮೇಲೆ ಕಾಣಿಸಲಿದ್ದು, ಬಳಿಕ ಈ ಫಲಿತಾಂಶದ ಪುಟವನ್ನು ಡೌನ್‌ ಲೋಡ್ ಮಾಡಿಕೊಳ್ಳಬಹುದಾಗಿದೆ.