Sunday, 12th May 2024

ದ್ವಿತೀಯ PUC 2024 ಫಲಿತಾಂಶ ಪ್ರಕಟ: ದ.ಕನ್ನಡ ಪ್ರಥಮ, ಗದಗಕ್ಕೆ ಕೊನೆಯ ಸ್ಥಾನ

ಬೆಂಗಳೂರು : ಕರ್ನಾಟಕದ ‘ದ್ವಿತೀಯ PUC 2024 ‘ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.81.15 ರಷ್ಟು ಫಲಿತಾಂಶ ಬಂದಿದೆ.

‘ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಕಲಾ ವಿಭಾಗದಲ್ಲಿ 1,28,488 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ.

ರಾಜ್ಯಕ್ಕೆ ವಿದ್ಯಾಲಕ್ಷ್ಮಿ ಟಾಪರ್. ಅವರು 600 ಕ್ಕೆ 598 ಅಂಕ ಗಳಿಸುವ ಮೂಲಕ ರಾಜ್ಯದ ಟಾಪರ್ ಆಗಿದ್ದಾರೆ’ ಎಂದು ತಿಳಿಸಿದ್ದಾರೆ.

ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ಜಿಲ್ಲೆ ಎರಡನೇ ಸ್ಥಾನ ಹಾಗೂ ವಿಜಯಪುರ ಜಿಲ್ಲೆ ಮೂರನೇ ಸ್ಥಾನ ಪಡೆದಿದೆ. ಉತ್ತರ ಕನ್ನಡ ನಾಲ್ಕು, ಕೊಡಗು ಜಿಲ್ಲೆ ಐದನೇ ಸ್ಥಾನ ಪಡೆದಿದೆ. ಗದಗ ಕೊನೆಯ ಸ್ಥಾನ ಪಡೆದಿದೆ.

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ.97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ.

ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದಾರೆ. ಪಿಯುಸಿ ಕಲಾ ವಿಭಾಗದಲ್ಲಿ ಇಬ್ಬರು ಟಾಪರ್ಗಳಾಗಿದ್ದಾರೆ. ಕಲಾ ವಿಭಾಗದಲ್ಲಿ ಮೇಧಾ ಡಿ. ಟಾಪರ್ 600ಕ್ಕೆ 596 ಅಂಕಗಳನ್ನು ಪಡೆದರೆ, ವಿಜಯಪುರದ ವೇದಾಂತ್ ಕೂಡ 600ಕ್ಕೆ 596 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 600ಕ್ಕೆ 597 ಅಂಕ ಪಡೆದು ಟಾಪರ್ ಆಗಿದ್ದಾರೆ.

ಇಂದು 11 ಗಂಟೆಯ ನಂತರ ಪಿಯು ಮಂಡಳಿಯ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಬಳಸಿಕೊಂಡು ಫಲಿತಾಂಶ ವೀಕ್ಷಿಸಬಹುದಾಗಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್ 1ರಿಂದ 22ರವರೆಗೆ ಪರೀಕ್ಷೆಗಳು ನಡೆದಿದ್ದವು. ನೋಂದಣಿ ಮಾಡಿಕೊಂಡ 6.98 ಲಕ್ಷ ವಿದ್ಯಾರ್ಥಿಗಳಲ್ಲಿ ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ತಮ್ಮ ಪರೀಕ್ಷೆ ಪ್ರವೇಶ ಪತ್ರದಲ್ಲಿ ನೀಡಲಾದ ರಿಜಿಸ್ಟರ್ ನಂಬರ್ / ರೋಲ್ ನಂಬರ್ (ನೋಂದಣಿ ಸಂಖ್ಯೆ) ಬಳಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ನೀಡುವ ವೆಬ್ಸೈಟ್ ನಲ್ಲಿ ಫಲಿತಾಂಶ ಚೆಕ್ ಮಾಡಬಹುದು.

Leave a Reply

Your email address will not be published. Required fields are marked *

error: Content is protected !!