Thursday, 21st November 2024

Self Harming: ಹಬ್ಬದ ದಿನ ಸತ್ತರೆ ಸ್ವರ್ಗ ಎಂಬ ಭ್ರಮೆಯಲ್ಲಿ ಪತ್ನಿಯ ಕೊಲೆಗಾರ ಆತ್ಮಹತ್ಯೆ

self harming

ಬೆಂಗಳೂರು: ಹಬ್ಬದ ದಿನ ಶುಭಮುಹೂರ್ತದಂದು ಸತ್ತರೆ ಸ್ವರ್ಗ ಸಿಗುತ್ತದೆ ಎಂಬ ಮೂಢನಂಬಿಕೆ (Superstition), ಭ್ರಮೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ವಿಚಿತ್ರವೆಂದರೆ, ಈ ವ್ಯಕ್ತಿ ಎರಡು ವರ್ಷಗಳ ಹಿಂದೆ ತನ್ನ ಪತ್ನಿಯನ್ನು ಕೊಂದು ಜೈಲಿನಲ್ಲಿದ್ದು ಬಂದಿದ್ದವನು. ಈ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ ಭೂಸಂದ್ರದಲ್ಲಿ ನಡೆದಿದೆ.

ಭೂಸಂದ್ರದ ಕೃಷ್ಣಮೂರ್ತಿ(40) ಮೃತ ದುರ್ದೈವಿ. ನಿನ್ನೆ(ನವೆಂಬರ್ 02) ದೀಪಾವಳಿ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಹಬ್ಬದ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಬಗ್ಗೆ ಚರ್ಚೆ ನಡೆಸಿದ್ದಾನೆ. ಬಳಿಕ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಮೃತ ಕೃಷ್ಣಮೂರ್ತಿ 22/11/2022ರಂದು ತನ್ನ ಪತ್ನಿಯನ್ನು ಕೊಂದು ಜೈಲು ಸೇರಿದ್ದ. ಎರಡು ವರ್ಷ ಜೈಲಿನಲ್ಲಿ ಇದ್ದು ಕಳೆದ 6 ತಿಂಗಳ ಹಿಂದೆ ಬಿಡುಗಡೆಯಾಗಿ ಆಚೆ ಬಂದಿದ್ದ. ನಿನ್ನೆ ಸ್ನೇಹಿತರೊಂದಿಗೆ ಹಬ್ಬ ದಿನ ಸತ್ತರೆ ಸ್ವರ್ಗ ಪ್ರಾಪ್ತಿ ಬಗ್ಗೆ ಚರ್ಚಿಸಿ ಬಳಿಕ ಸಾವಿಗೆ ಶರಣಾಗಿದ್ದಾನೆ. ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಕೆರೆಯಲ್ಲಿ ಮುಳುಗಿ ಕುಟುಂಬದ ಮೂವರು ಸಾವು

ಚಿಕ್ಕಬಳ್ಳಾಪುರ: ಒಂದೇ ಕುಟುಂಬದ ಮೂವರು ಕೆರೆಯಲ್ಲಿ ಮುಳುಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕಂಬತ್ತನಹಳ್ಳಿ ಗ್ರಾಮದ ಬಳಿ ನಡೆದಿದೆ. ರಂಜಿತ್(27), ರಮ್ಯಾ(24), ಅಭಿಲಾಶ್(21) ಮೃತ ದುರ್ದೈವಿಗಳು. ದೀಪಾವಳಿ ಹಬ್ಬದ ಪ್ರಯುಕ್ತ ಸಂಬಂಧಿಗಳು ಊಟಕ್ಕೆ ಸೇರಿದ್ದರು. ಊಟದ ನಂತರ ಈಜಾಡಲು ಕೆರೆಗೆ ಇಳಿದಿದ್ದಾರೆ. ಆದರೆ ಆಳ ಅರಿಯದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ರಾಮನಗರ ಮೂಲದ ರಮ್ಯಾ, ಚಂದಪುರ ಮೂಲದ ಅಭಿಲಾಷ್ ಮತ್ತು ಶ್ರೀನಿವಾಸಪುರ ಮೂಲದ ಎಸ್. ರಂಜೀತ್ ಕುಮಾರ್​ ದೀಪಾವಳಿ ಹಬ್ಬದ ಪ್ರಯುಕ್ತ ಸಂಬಂಧಿಕರ ಮನೆಗೆ ಮೂವರು ಆಗಮಿಸಿದ್ದಾಗ ಅವಘಡ ಸಂಭವಿಸಿದೆ. ಸದ್ಯ ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್​ಪಿ ಕುಶಲ್ ಚೌಕ್ಸೆ, ಎಎಸ್ಪಿ ಆರ್.ಐ ಖಾಸಿಂ, ಡಿವೈಎಸ್​ಪಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇದನ್ನೂ ಓದಿ: Director Guruprasad: ಗುರುಪ್ರಸಾದ್ ಸಾವಿನ ಕಾರಣ 2ನೇ ಪತ್ನಿಯ ದೂರಿನಲ್ಲಿ ಬಯಲು