ಬೆಂಗಳೂರು: ಪತ್ನಿಯ ಕಿರುಕುಳದಿಂದ (Harassment) ನೊಂದು ಪೊಲೀಸ್ ಹೆಡ್ ಕಾನ್ಸ್ಟೇಬಲ್ (Police Constable) ಒಬ್ಬರು ಡೆತ್ನೋಟ್ (Death note) ಬರೆದಿಟ್ಟು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾರೆ. ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಲವೇ ದಿನಗಳ ಹಿಂದೆ ಟೆಕ್ಕಿಯೊಬ್ಬರು ಇದೇ ಕಾರಣದಿಂದ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆಯ ನೆನಪು ಇನ್ನೂ ಮಾಸಿಲ್ಲದಿರುವಾಗಲೇ ಇದು ನಡೆದಿದೆ.
ಇತ್ತೀಚಿಗೆ ಬೆಂಗಳೂರಿನಲ್ಲಿ ಪತ್ನಿಯ ಕಾಟಕ್ಕೆ ಮನನೊಂದು ಟೆಕ್ಕಿ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು, ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಬೆಂಗಳೂರಿನಲ್ಲಿ ಪತ್ನಿ ಹಾಗೂ ಮಾವನ ಕಾಟಕ್ಕೆ ಬೇಸತ್ತು ಹೆಡ್ ಕಾನ್ಸ್ಟೇಬಲ್ ಒಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ತಿಪ್ಪಣ್ಣ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹುಳಿಮಾವು ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ತಿಪ್ಪಣ್ಣ ಕೆಲಸ ಮಾಡುತ್ತಿದ್ದರು. ಅವರ ಪತ್ನಿ ಹಾಗೂ ಮಾವನ ಕಿರುಕುಳದ ಬಗ್ಗೆ ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ತಿಪ್ಪಣ್ಣ ಅವರು ಮದುವೆಯಾಗಿದ್ದರು. ಒಂದು ವರ್ಷದ ವರೆಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಒಂದು ವರ್ಷದ ಬಳಿಕ ಸಂಸಾರದಲ್ಲಿ ವೈಮನಸ್ಸು, ಕಲಹ ಉಂಟಾಗಿದೆ. ಪತ್ನಿಯ ಅಪ್ಪ ಯಮುನಪ್ಪ ಎನ್ನುವವರು ಕೂಡ ಮಾನಸಿಕವಾಗಿ ಹಿಂಸೆ ನೀಡಿದ್ದು, ಅಶ್ಲೀಲವಾಗಿ ಬೈದು ಕಿರುಕುಳ ನೀಡಿದ್ದಾರೆ. ಮಾವ ಯಮುನಪ್ಪ ಜೀವ ಬೆದರಿಕೆ ಹಾಕಿರುವ ಬಗ್ಗೆ ಡೆತ್ ನೋಟ್ನಲ್ಲಿ ತಿಪ್ಪಣ್ಣ ಆರೋಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ರೈಲ್ವೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.
ಮಂಡ್ಯದಲ್ಲಿ ನೀರಿನ ಟ್ಯಾಂಕ್ಗೆ ಏಣು ಬಿಗಿದುಕೊಂಡು ಇಂಜಿನಿಯರ್ ಆತ್ಮಹತ್ಯೆ
ಮಂಡ್ಯ : ನೀರಿನ ಟ್ಯಾಂಕ್ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಸ್ತೂರು ಪೋಲೀಸ್ ಠಾಣಾ ವ್ಯಾಪ್ತಿಯ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಜ್ಞಾನೇಷ್ (30) ಎಂಬವರು ಹೆಬ್ಬೆರಳು ಏತ ನೀರಾವರಿ ಬಳಿ ನೀರಿನ ಟ್ಯಾಂಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಞಾನೇಷ್ ಶಿಂಷಾ ಏತ ನೀರಾವರಿ ಯೋಜನೆಯ ಬಾಪೂಜಿ ಕನ್ಸ್ಟ್ರಕ್ಷನ್ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ನಿವಾಸಿ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕೆಸ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: Bengaluru techie Case: ಪ್ರಕರಣ ಇತ್ಯರ್ಥಕ್ಕೆ 5 ಲಕ್ಷ ರೂ. ಬೇಡಿಕೆ ಇಟ್ಟಿದ್ದ ನ್ಯಾಯಾಧೀಶರು: ಅತುಲ್ ತಂದೆಯಿಂದ ಆಕ್ರೋಶ