Friday, 13th December 2024

ಪ್ರತ್ಯೇಕ ಉದ್ಯೋಗ ಹಾಗೂ ಕೃಷಿ ಬಜೆಟ್ ಮಂಡನೆಗೆ ಒತ್ತಾಯ

ಹರಪನಹಳ್ಳಿ: ಪ್ರಸಕ್ತ ಸಾಲಿ(2022-23) ನಲ್ಲಿ ರಾಜ್ಯ ಸರ್ಕಾರ ಮಂಡಿಸಲಿರುವ ಆರ್ಥಿಕ ಬಜೆಟ್ ನಲ್ಲಿ ನಿರುದ್ಯೋಗದಿಂದ ಕಂಗಾಲಾಗಿರುವ ಯುವ ಜನಾಂಗದ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಉದ್ಯೋಗ ಬಜೆಟ್ ಮಂಡನೆ ಮತ್ತು ಪ್ರಕೃತಿ ವಿಕೋಪದಿಂದಾಗಿ ಬೆಳೆಹಾನಿ ಆಸ್ತಿ ಪಾಸ್ತಿ ಕಳೆದುಕೊಂಡು ಕಂಗಾಲಾಗಿರುವ, ಅನ್ನದಾತ ರೈತರ ನೆರವಾಗುವ ನಿಟ್ಟಿನಲ್ಲಿ ಪ್ರತ್ಯೇಕವಾಗಿ ಕೃಷಿ ಬಜೆಟ್ ಮಂಡಿಸಬೇಕು ಎಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯ ಶಶಿಧರ್ ಪೂಜಾರ್ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿ, ಪಕ್ಕದ ರಾಜ್ಯ ಆಂದ್ರದ ಮಾದರಿಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಉದ್ಯೋಗಗಳನ್ನು ಸೃಷ್ಠಿ ಮಾಡಬೇಕು ಎಂದು ಸಹ ಶಶಿಧರ್ ಪೂಜಾರ್ ಒತ್ತಾಯಿಸಿದ್ದಾರೆ.