Wednesday, 4th December 2024

Shubhalata Asnotikar: ಮಾಜಿ ಎಂಎಲ್‌ಸಿ ಶುಭಲತಾ ಅಸ್ನೋಟಿಕರ್ ಅನಾರೋಗ್ಯದಿಂದ ನಿಧನ

Shubhalata Asnotikar

ಕಾರವಾರ: ವಿಧಾನ ಪರಿಷತ್ ಮಾಜಿ ಸದಸ್ಯೆ ಶುಭಲತಾ ಅಸ್ನೋಟಿಕರ್ (68) (Shubhalata Asnotikar) ವಯೋಸಹಜ ಅನಾರೋಗ್ಯದಿಂದ ನಗರದ ಸ್ವಗೃಹದಲ್ಲಿ ಬುಧವಾರ ನಿಧನರಾದರು. 2002 ರಿಂದ 2008ರ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಉತ್ತರ ಕನ್ನಡ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಇವರು ಆಯ್ಕೆಯಾಗಿದ್ದರು.

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ಅಸ್ನೋಟಿಕರ್ ಅವರು ಹಲವು ತಿಂಗಳಿಂದ ಚಿಕಿತ್ಸೆ ಪಡೆಯುತಿದ್ದರು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಪತಿ, ಮಾಜಿ ಶಾಸಕ ವಂಸತ್ ಅಸ್ನೋಟಿಕರ್ ಹತ್ಯೆಯಾದ ನಂತರ ಇವರು ವಿಧಾನ ಪರಿಷತ್ ಸದಸ್ಯರಾಗಿದ್ದರು.

ಇವರು ಸದ್ಯ ಕಾರವಾರ ಡಾಕ್ ಆ್ಯಂಡ್ ಪೋರ್ಟ್ ವರ್ಕರ್ಸ್‌ ಯೂನಿಯನ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತರಿಗೆ ಪುತ್ರ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Kalinga Rao: ಸ್ಫೂರ್ತಿಪಥ ಅಂಕಣ: ಕನ್ನಡದ ಸುಗಮ ಸಂಗೀತ ಲೋಕದ ಉದಯಸೂರ್ಯ- ಪಿ ಕಾಳಿಂಗ ರಾವ್