ಇಂಡಿ: ಮಾಜಿ ಮುಖ್ಯ ಮಂತ್ರಿ , ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಜನ್ಮದಿನದ ಪ್ರಯುಕ್ತ ಅಮೃತ ಮಹೋತ್ಸವ ಕಾರ್ಯಕ್ರಮ ದಾವಣಗೇರಿಯಲ್ಲಿ ಅಗಸ್ಟ ೩ರಂದು ನಡೆಯಲಿದ್ದು ಪೂರ್ವಭಾವಿ ಸಭೆ ಕರೆಯಲಾಗಿದೆ.
ಪಟ್ಟಣದ ವಿಜಯಪೂರ ರಸ್ತೆಯ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜುಲೈ.೨೪ ರಂದು ರವಿವಾರ ಬೆಳಿಗ್ಗೆ ೧೦-೦೦ಗಂಟೆಗೆ ಅಮೃತ ಮಹೋತ್ಸವ ಕಾರ್ಯಕ್ರಮದ ನಿಮಿತ್ಯ ಪೂರ್ವಭಾವಿ ಸಭೆ ಕರೆಯಲಾಗಿದ್ದು ಸಭೆಯ ಅಧ್ಯಕ್ಷತೆ ಶಾಸಕ ಯಶವಂತರಾಯಗೌಡ ಪಾಟೀಲ ವಹಿಸಲ್ಲಿದ್ದಾರೆ. ಆದ್ದರಿಂದ ಪಕ್ಷದ ಮುಖಂಡರು,ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವೀಗೊಳಿಸಬೇಕು ಎಂದು ಕಾಂಗ್ರೆಸ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.