Sunday, 15th December 2024

ಕಾಂಗ್ರೆಸ್ ಸೋಲುವ ಸತ್ಯ ಸಿದ್ದರಾಮಯ್ಯ ಅವರಿಗೆ ಗೊತ್ತಿದೆ: ಬಸವರಾಜ ಬೊಮ್ಮಾಯಿ

ಹುಮ್ನಾಬಾದ್: ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಸೋಲುತ್ತೆ ಎಂಬ ಸತ್ಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಗೊತ್ತಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಶುಕ್ರವಾರ ಹುಮ್ನಾಬಾದಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಈ ಸತ್ಯವನ್ನು ವಿಧಾನ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆದ್ದಿದ್ದಾರೆ. ಈಗ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಆದರೂ ಈ ಸತ್ಯವನ್ನು ಮರೆಮಾಚಲು ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಪಕ್ಷದಲ್ಲಿ ಕೆಲಸ ಮಾಡಲು ಯಾರೂ ತಯಾರಿಲ್ಲ ಜನತಾದಳ ಮತ್ತು ಎಂಐಎಂ ಪಕ್ಷಗಳ ಅಭ್ಯರ್ಥಿಗಳ ಸ್ಪರ್ಧೆಯಿಂದ ಕಾಂಗ್ರೆಸ್ ಪಕ್ಷ ಗಾಬರಿಯಾಗಿದೆ. 2018 ರ ಚುನಾವಣೆಯಲ್ಲಿ ಎಸ್ಎಫ್ಐ ಮತ್ತು ಎಂಐಎಂ ಸ್ಪರ್ಧೆ ಘೋಷಣೆ ಮಾಡಿದಾಗ ಅವರ ಜೊತೆ ಡಿಲ್ ಮಾಡಿಕೊಂಡವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

***
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಸತ್ಯ ಸಿದ್ದರಾಮಯ್ಯ ಅವರಿಗೆ ಗೊತ್ತಿದೆ. ಈ ವಿಷಯವನ್ನು ಅವರು ವಿಧಾನಸಭೆ ಯಲ್ಲಿಯೇ ಒಪ್ಪಿಕೊಂಡಿದ್ದಾರೆ. ಆದರೂ ಸತ್ಯವನ್ನು ಮರೆಮಾಚಲು ಕಾಂಗ್ರೆಸ್ ಗೆಲ್ಲುತ್ತೆ ಎಂದು ಸುಳ್ಳು ಹೇಳುತ್ತಿದ್ದಾರೆ.

ಬಸವರಾಜ ಬೊಮ್ಮಾಯಿ, ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ