Friday, 13th December 2024

ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

ಹೊಸಪೇಟೆ/ಕೊಪ್ಪಳ: ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ನಮ್ಮ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿರಲಿದ್ದೇನೆ, ಮಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಮ್ಮದು ರಾಷ್ಟ್ರೀಯ ಪಕ್ಷ. ಏನೇ ತೀರ್ಮಾನವಾದರು ಅದು ಹೈಕಮಾಂಡ್ ಜೊತೆ ಚರ್ಚೆ ಮಾಡಿಯೇ ಆಗೋದು. ಡಿಸಿಎಂ ವಿಚಾರ ತೀರ್ಮಾನ ಮಾಡೋದು ಕೂಡ ಹೈಕಮಾಂಡ್ ಎಂದರು. ರಮೇಶ್ ಜಾರಕಿಹೊಳಿ ಸರ್ಕಾರ ಬೀಳುತ್ತೆ ಎನ್ನುವ ಹೇಳಿಕೆ ಬಗ್ಗೆ ಪ್ರಸ್ತಾಪಿಸಿ, ಅವರು ಸೋತಿದ್ದಾರೆ, ಬೇರೆ ಕೆಲಸ ಇಲ್ಲದೆ ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದರು.

ರಾಜ್ಯದ ಜನ ನಮಗೆ 136 ಸೀಟು ಕೊಟ್ಟು ಗೆಲ್ಲಿಸಿದ್ದಾರೆ. ಐದು ವರ್ಷ ಸುಭದ್ರ ಸರ್ಕಾರ ಕೊಡುತ್ತೇವೆ. ಬಿಜೆಪಿಯವರು ಭ್ರಮ ನಿರಸರಾಗಿದ್ದಾರೆ. ಅವರಿಗೆ ಅಧಿಕಾರ ಇಲ್ಲದೆ ಇರಲು ಆಗಲ್ಲ.

ಮತ್ತೆ ಅಪರೇಷನ್ ಮಾಡೋಕೆ ಪ್ರಯತ್ನ ಮಾಡುತ್ತಾರೆ. ಅದು ಸಾಧ್ಯವಾಗಲ್ಲ ಎಂದು ಸಿದ್ದರಾಮಯ್ಯ ಹೇಳಿದರು.