ಬೆಂಗಳೂರು: ರೇಷ್ಮೆ ಬೆಳೆಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 10 ಸಾವಿರ ಪ್ರೋತ್ಸಾಹ ಧನ ಹೆಚ್ಚಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದ ರೈತರ ಅಭಿವೃದ್ಧಿಗಾಗಿ ರೈತ ಶಕ್ತಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಇದಕ್ಕಾಗಿ 500 ಕೋಟಿ ಅನುದಾನ ಮೀಸಲಿಡಲಾಗಿದೆ. ಎರಡನೇ ಕೃಷಿ ನಿರ್ದೇಶನಲಾಯ ಸ್ಥಾಪಿಸಲಾಗಿದೆ. ರಾಜ್ಯದ ಕೆರೆಳಗ ಅಭಿವೃದ್ಧಿಗೆ 500 ಕೋಟಿ ಅನುದಾನ ನೀಡಲಾಗುತ್ತದೆ ಎಂದರು.
ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮಿನಿ ಆಹಾರ ಪಾರ್ಕ್ ರಾಜ್ಯದ ಎಲ್ಲೆಡೆ ನಿರ್ಮಾಣ ಮಾಡಲಾಗುತ್ತಿದೆ. ಸಾವಯವ ಉತ್ಪನ್ನದಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ. 642 ಕೋಟಿ ರೂ ವೆಚ್ಚದಲ್ಲಿ ಪ್ರಧಾನ ಕೃಷಿ ಸಿಂಚನ ಯೋಜನೆ ಜಾರಿಗೊಳಿಸಲಾಗುತ್ತದೆ. 2ನೇ ಘಟಕ ಯೋಜನೆ ಜಾರಿಗೆ ತರಲಾಗುತ್ತದೆ ಎಂದರು. ಕೊಡಗು, ಕೊಪ್ಪಳದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲಾಗುತ್ತದೆ ಎಂದರು.
ದ್ವಿತಳಿ ರೇಷ್ಮೆ ಗೂಡಿಗೆ 10 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ. ಪ್ರತಿ ಟನ್ ಗೆ 10 ಸಾವಿರ ಪ್ರೋತ್ಸಾಹ ಧನ ಹೆಚ್ಚಿಸಲಾಗುತ್ತಿದೆ. ಈ ಮೂಲಕ ರೇಷ್ಮೆ ಗೂಡಿನ ಬೆಳೆಗಾರರಿಗೆ ನೆರವಾಗಲು ಸರ್ಕಾರ ನಿರ್ಧರಿಸಲಾಗಿದೆ ಎಂದರು.