Wednesday, 9th October 2024

ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ಕ್ಷೇತ್ರದ ಉಪ ಚುನಾವಣೆ

ಬೆಂಗಳೂರು: ಅಕ್ಟೋಬರ್ 30 ರಂದು ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ.

ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ, ಸಿಂದಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಉಪಚುನಾವಣೆ ಘೋಷಣೆ ಮಾಡಲಾಗಿದೆ. ಹಾನಗಲ್ ಕ್ಷೇತ್ರ ಉಳಿಸಿಕೊಳ್ಳಲು ಆಡಳಿತ ಪಕ್ಷ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು, ಉದಾಸಿ ಅವರ ಪುತ್ರ ಸಂಸದರಾದ ಶಿವಕುಮಾರ ಉದಾಸಿ ಅವರನ್ನು ಕಣಕ್ಕಿಳಿಸಲಿದೆ ಎನ್ನಲಾಗಿದೆ.

ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದು, ಬಹುತೇಕ ಅವರೇ ಅಭ್ಯರ್ಥಿಯಾಗಲಿದ್ದಾರೆ ಎನ್ನಲಾಗಿದೆ.