Saturday, 27th July 2024

ಶಿರಾ ಜೆಡಿಎಸ್ ಅಭ್ಯರ್ಥಿಗೂ ಕೊರೋನಾ ಪಾಸಿಟಿವ್ ದೃಢ

ಬೆಂಗಳೂರು : ಶಿರಾ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಮಂಗಳವಾರ ಶಿರಾ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಯಾಗಿ ದಿವಂಗತ ಶಾಸಕ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಮಾಡಿ ದ್ದರು.

ಈ ಕುರಿತಂತೆ ಮಾಹಿತಿ ನೀಡಿರುವ ಪುತ್ರ ಸತ್ಯಪ್ರಕಾಶ್, ಕಳೆದ ಮೂರು ದಿನಗಳಿಂದ ನಮ್ಮ ತಾಯಿ ಅಮ್ಮಾಜಮ್ಮ ಮೈಕೈನೋವಿನಿಂದ ಬಳಲುತ್ತಿದ್ದರು. ಹೀಗಾಗಿ, ಕೊರೋನಾ ಪರೀಕ್ಷೆಗೆ ಒಳಪಟ್ಟಿದ್ದರು. ಈಗ ವರದಿ ಬಂದಿದ್ದು, ಅವರಿಗೊ ಕೊರೋನಾ ಪಾಸಿ ಟಿವ್ ಎಂಬುದಾಗಿ ದೃಢಪಟ್ಟಿದೆ.

ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!