ಬೆಳ್ತಂಗಡಿ: ಕರ್ನಾಟಕ ಕಂಡ ಧೀಮಂತ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್. ಎಂ. ಕೃಷ್ಣ (92) (SM Krishna) ಅವರು ನಿಧನರಾಗಿದ್ದಾರೆ. ಎಸ್‌ಎಂ ಕೃಷ್ಣ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಶ್ರೀ ಎಸ್. ಎಂ. ಕೃಷ್ಣ ನಿಧನರಾದ ಸುದ್ದಿ ತಿಳಿದು ವಿಷಾದವಾಯಿತು. ಮಹಾಮೇಧಾವಿಯಾಗಿದ್ದ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಪ್ರಗತಿಪರ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದರು ಎಂದು ರಾಜ್ಯ ಸಭಾ ಸದಸ್ಯ, ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು(Veerendra Heggade) ಸಂತಾಪ(condolences) ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಭಾವಚಿತ್ರ ಸಹಿತ ಮಂಗಳವಾರ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರುವ ಧರ್ಮಾಧಿಕಾರಿಗಳು, ದಕ್ಷ ಆಡಳಿತದಾರರಾಗಿದ್ದ ಅವರು ಶಿಸ್ತಿನ ಸಿಪಾಯಿಯಾಗಿ, ಉತ್ತಮ ವಾಗ್ಮಿಯಾಗಿ, ಮತ್ತು ಹಿರಿಯ ರಾಜಕೀಯ ಮುತ್ಸದ್ದಿಯಾಗಿ ಚಿರಪರಿಚಿತರಾಗಿದ್ದರು. ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ, ಮಹಾರಾಷ್ಟ್ರ ರಾಜ್ಯಪಾಲರಾಗಿ, ಕೇಂದ್ರ ಸರಕಾರದ ವಿದೇಶಾಂಗ ಸಚಿವರಾಗಿ ಅಪಾರ ಅನುಭವ ಮತ್ತು ಪರಿಣತಿ ಹೊಂದಿದ್ದರು ಎಂದು ಬರೆದುಕೊಂಡಿದ್ದಾರೆ..
ಹಾಗೇ ”ಧರ್ಮಸ್ಥಳದ ಅಭಿಮಾನಿಯೂ, ಭಕ್ತರೂ ಆಗಿದ್ದ ಅವರು ನಮ್ಮ ಕ್ಷೇತ್ರದ ಅನೇಕ ಸಮಾರಂಭಗಳಲ್ಲಿ ಭಾಗವಹಿಸಿ ಪ್ರೋತ್ಸಾಹಿಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇರಿದಂತೆ ನಮ್ಮ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರ ನೀಡಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ” ಎಂದು ಎಕ್ಸ್ ಅಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.
ಈ ಸುದ್ದಿಯನ್ನೂ ಓದಿ: SM Krishna Passed away: ಎಸ್‌ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ