Monday, 23rd December 2024

Drone Pratap: ಕೃಷಿ ಹೊಂಡದಲ್ಲಿ ಸ್ಫೋಟ, ಡ್ರೋನ್ ಪ್ರತಾಪ್‌ಗೆ ಜಾಮೀನು ನೀಡಿದ ಕೋರ್ಟ್

Drone Prathap blast

ತುಮಕೂರು : ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ (Sodium metal) ಬಳಸಿ ಸ್ಫೋಟ (Blast case) ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡ್ರೋನ್ ಪ್ರತಾಪ್‌ಗೆ (Drone Pratap) ಜಾಮೀನು (bail) ಮಂಜೂರು ಮಾಡಲಾಗಿದೆ. ತುಮಕೂರು (Tumkur news) ಜಿಲ್ಲೆಯ ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಪ್ರತಾಪ್‌ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

ಬಿಗ್ ಬಾಸ್ ರಿಯಾಲಿಟಿ ಶೋದ ಮಾಜಿ ಸ್ಪರ್ದಿ ಪ್ರತಾಪ್‌, ತುಮಕೂರಿನ ಕೃಷಿಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟದ ಪ್ರಯೋಗ ಮಾಡಿದ್ದರು. ಜನಕಲೋಟಿ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಸ್ಪೋಟದ ಪ್ರಯೋಗ ಮಾಡಿದ್ದಲ್ಲದೆ, ಸ್ಫೋಟದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.

ಸ್ಪೋಟದ ವಿಡಿಯೋವನ್ನು ಆಧರಿಸಿ ಮಿಡಿಗೇಶಿ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡು ಡ್ರೋನ್ ಪ್ರತಾಪ್ ಅವರನ್ನು ಆರೆಸ್ಟ್ ಮಾಡಿದ್ದರು. ಬಳಿಕ ಅವರ ಇಬ್ಬರು ಸ್ನೇಹಿತರನ್ನು ಕೂಡ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಡ್ರೋನ್ ಪ್ರತಾಪ್‌ಗೆ ಡಿಸೆಂಬರ್ 26ರವರೆಗೆ ಅಂದರೆ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್‌ ಆದೇಶ ಹೊರಡಿಸಿತ್ತು. ಇದೀಗ ಜಾಮೀನು ಮಂಜೂರು ಆಗಿರುವ ಹಿನ್ನೆಲೆಯಲ್ಲಿ ನಾಳೆ ಜೈಲಿನಿಂದ ಡ್ರೋನ್ ಪ್ರತಾಪ್ ಬಿಡುಗಡೆ ಆಗಲಿದ್ದಾರೆ.

ಈ ಪ್ರಕರಣದ ಬಗ್ಗೆ ಸಂಪೂರ್ಣ ವಿವರ ನೀಡುವಂತೆಯೂ ಮುಖ್ಯಮಂತ್ರಿಗಳ ಸಚಿವಾಲಯದಿಂದ ಆದೇಶ ನೀಡಲಾಗಿತ್ತು. ಸೋಡಿಯಂ ಮೆಟಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧುಗಿರಿ ಸಿಪಿಐ ಕಚೇರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಆಗಮಿಸಿ ಹೆಚ್ಚಿನ ಮಾಹಿತಿ ಸಂಗ್ರಹಿಸಿದ್ದರು. ಡ್ರೋನ್‌ ಪ್ರತಾಪ್‌ ಈ ಹಿಂದೆಯೂ ಕೆಲವು ವಂಚನೆ ಪ್ರಕರಣಗಳಲ್ಲಿ ಸುದ್ದಿಯಾಗಿದ್ದಾರೆ.

ಇದನ್ನೂ ಓದಿ: Drone Pratap: ಡ್ರೋನ್ ಪ್ರತಾಪ್ ಸ್ಫೋಟ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡಲು ಸಿಎಂ ಕಚೇರಿ ಸೂಚನೆ