Friday, 10th January 2025

SSLC, 2nd PUC Exam Timetable: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

SSLC, 2nd PUC Exam Timetable: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ- 1 ಹಾಗೂ ಮಾರ್ಚ್ 1 ರಿಂದ ಮಾರ್ಚ್ 20ರವರೆಗೆ ದ್ವೀತಿಯ ಪಿಯುಸಿ- 1 ಪರೀಕ್ಷೆ ನಡೆಯಲಿದೆ.

SSLC ಪರೀಕ್ಷೆ -1 ವೇಳಾಪಟ್ಟಿ

ಮಾರ್ಚ್ 21- ಪ್ರಥಮ ಭಾಷೆ
ಮಾರ್ಚ್ 24- ಗಣಿತ
ಮಾರ್ಚ್ 26- ದ್ವಿತೀಯ ಭಾಷೆ
ಮಾರ್ಚ್ 29- ಸಮಾಜ ವಿಜ್ಞಾನ
ಏಪ್ರಿಲ್ 2- ವಿಜ್ಞಾನ
ಏಪ್ರಿಲ್ 4- ತೃತೀಯ ಭಾಷೆ

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ

ಮಾರ್ಚ್ 1- ಕನ್ನಡ, ಅರೇಬಿಕ್
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲಿಷ್
ಮಾರ್ಚ್ 17- ಭೂಗೋಳಶಾಸ್ತ್ರ
ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್
ಮಾರ್ಚ್ 20- ಹಿಂದಿ

ಈ ಸುದ್ದಿಯನ್ನೂ ಓದಿ | AIIMS Recruitment 2025: 10, 12ನೇ ತರಗತಿ, ಐಟಿಐ ಪಾಸಾದವರಿಗೆ ಗುಡ್‌ನ್ಯೂಸ್‌; ಏಮ್ಸ್‌ನಲ್ಲಿದೆ ಬರೋಬ್ಬರಿ 4,576 ಹುದ್ದೆ

Leave a Reply

Your email address will not be published. Required fields are marked *