Friday, 22nd November 2024

ಜ.1 ರಿಂದ, ಎಸ್‌.ಎಸ್‌.ಎಲ್‌.ಸಿ, ದ್ವಿತೀಯ ಪಿಯುಸಿ ತರಗತಿ ಆರಂಭ

6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಶನಿವಾರ ನಡೆದ ಶಾಲಾ-ಕಾಲೇಜು ಪುನರಾ ರಂಭದ ಸಭೆಯಲ್ಲಿ, ಜನವರಿ 1ರಿಂದ ಬೋರ್ಡ್ ಪರೀಕ್ಷೆ ಹೊಂದಿರುವಂತ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಂಡಿದೆ. ಶಾಲೆಗಳಲ್ಲಿ ಬಿಸಿಯುಟವನ್ನು ತಾತ್ಕಾಲಿಕವಾಗಿ ನಿಲುಗಡೆ ಮಾಡಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಜನವರಿ 1ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಪುನರಾರಂಭಿಸಲಾಗಿದೆ. 2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಮಾಡಲಾಗುತ್ತಿದೆ ಎಂದರು.

ವಿದ್ಯಾಗಮವನ್ನು ಈ ಬಾರಿ ಹೊಸ ರೂಪದಲ್ಲಿ ಆರಂಭಿಸಲಾಗುತ್ತಿದೆ. ವಿದ್ಯಾರ್ಥಿಗಳ ಬಳಿಗೆ ಶಿಕ್ಷಕರು ತೆರಳಿ ಪಾಠ ಮಾಡು ತ್ತಿದ್ದಂತ ಕ್ರಮದ ಬದಲಾಗಿ ಶಾಲಾ ಆವರಣದಲ್ಲಿಯೇ ವಿದ್ಯಾಗಮ ನಡೆಸಲಾಗುತ್ತದೆ. ಕೋವಿಡ್-19 ಸೋಂಕಿನ ಲಕ್ಷಣ ಗಳಿರುವ ಮಕ್ಕಳಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಜ.1ರಿಂದ ಶಾಲೆ ಆರಂಭಗೊಂಡರು ವಿದ್ಯಾರ್ಥಿಗಳಿಗೆ ತರಗತಿಗೆ ಹಾಜರಾಗುವುದು ಕಡ್ಡಾಯವಿಲ್ಲ. ಆನ್ ಲೈನ್, ಆಫ್ ಲೈನ್ ಮೂಲಕವೂ ತರಗತಿ ಕಲಿಕೆಗೆ ಹಾಜರಾಗಬಹುದಾಗಿದೆ ಎಂದು ಹೇಳಿದರು.

ವಿದ್ಯಾರ್ಥಿಗಳು ತರಗತಿಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ತರಬೇಕು. ಜನವರಿ 1ರಿಂದ ರಾಜ್ಯದಲ್ಲಿ ಬೋರ್ಡ್ ಪರೀಕ್ಷೆಗಳಿರುವಂತ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ತರಗತಿಗಳನ್ನು ಪುನರಾರಂಭಿಸಲಾಗುತ್ತದೆ ಎಂದರು.