Friday, 13th December 2024

ಜುಲೈ ಕೊನೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಗ್ರೇಡ್ ಆಧಾರದಲ್ಲಿ ಪಾಸ್: ಸುರೇಶ್‌ ಕುಮಾರ್‌

ಬೆಂಗಳೂರು: ಪಿಯುಸಿ ಪರೀಕ್ಷೆ ರದ್ದಾದರೂ, ಜುಲೈ ಕೊನೆ ವಾರ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಜೂನ್ 23 ಇಲ್ಲವೇ 24 ರಂದು ಪ್ರಕಟಿಸಲಾಗು ವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.

ದ್ವಿತಿಯ ಪಿಯುಸಿ ಪರೀಕ್ಷೆಗಳನ್ನು ಈ ವರ್ಷ ನಡೆಸದಿರಲು ತೀರ್ಮಾನಿಸಲಾಗಿದೆ. ಕಳೆದ ವರ್ಷ ಪ್ರಥಮ ಪಿಯುಸಿಯ ವಿದ್ಯಾರ್ಥಿ ಗಳ ಅಂಕಗಳ ಆಧಾರದ ಮೇಲೆ ಪಿಯು ಬೋರ್ಡ್ ಮಾನದಂಡದ ಆಧಾರದ ಮೇಲೆ ಎ ಪ್ಲಸ್, ಎ, ಬಿ, ಗ್ರೇಡ್ ಅನುಸಾರ ಪಾಸ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಫಲಿತಾಂಶದ ಬಗ್ಗೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳು ಕೋವಿಡ್ ನಂತರ ಪರೀಕ್ಷೆ ಬರೆಯಬಹುದು, ಅವರಿಗಾಗಿ ಪರೀಕ್ಷೆ ನಡೆಸ ಲಾಗುವುದು. ಈ ವರ್ಷ ಸೆಕೆಂಡ್ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ. ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಎಸ್‌ಎಸ್‌ಎಲ್‌ಸಿ ಎರಡು ಪತ್ರಿಕೆಗಳ ಪರೀಕ್ಷೆ ನಡೆಯಲಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನಗಳ ಕೋರ್ ಸಬ್ಜೆಕ್ಟ್ ಪರೀಕ್ಷೆ. ಆಯ್ಕೆ ಮಾದರಿಯಲ್ಲಿ ಸರಳವಾಗಿ ಪರೀಕ್ಷೆ ನಡೆಸಲಾಗುವುದು. ಇನ್ನೊಂದು ಪತ್ರಿಕೆ ಭಾಷೆ ಪರೀಕ್ಷೆ ನಡೆಯಲಿದೆ. ಮಕ್ಕಳ ಶೈಕ್ಷಣಿಕ ಭವಿಷ್ಯದ ದೃಷ್ಠಿಯಿಂದ ಪರೀಕ್ಷೆ ಮಾಡಲಾಗುವುದು. ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲಾಗುವುದು. ಪ್ರೌಢಶಿಕ್ಷಣ ಮಂಡಳಿ ಮಾರ್ಗಸೂಚಿ ನೀಡಲಿದೆ ಎಂದು ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 10 ದಿನ ಮೊದಲು ದಿನಾಂಕ ಪ್ರಕಟಿಸಲಾಗುವುದು. ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದವರಿಗೆ ಮತ್ತೊಮ್ಮೆ ಪರೀಕ್ಷೆ ನಡೆಯಲಿದೆ ಎಂದು ವಿವರ ನೀಡಿದರು.