Sunday, 6th October 2024

ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ

ಬೆಂಗಳೂರು : ಇದೇ ಜುಲೈ 19ರಂದು ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗುತ್ತಿದ್ದು, ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲು 10.30 ರಿಂದ ಮಧ್ಯಾಹ್ನ 1.30 ರವರಗೆ ಸಮಯವಿರುತ್ತದೆ.

ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೋಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರು ಮತ್ತು 40,49,38 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ಒಂದು ಕೊಠಡಿಯಲ್ಲಿ 12 ಮಕ್ಕಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪರೀಕ್ಷೆಗೆ 14,927 ಶಾಲೆಗಳನ್ನು ನೊಂದಾಯಿಸಲಾಗಿದೆ.

ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳ ವರೆಗೆ ಕೆ ಎಸ್ ಆರ್ ಟಿ ಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿದೆ.

ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳನ್ನು ಸರ್ಕಾರ ಆದೇಶದಂತೆ ದಿನಾಂಕ ಜು.19 ಮತ್ತು 22ರಂದು ನಡೆಸಲು ತೀರ್ಮಾನಿಸಿದ್ದು, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾ ಣಿಸಲು ಅನುಮತಿಸುವಂತೆ ಕೋರಲಾಗಿರುತ್ತದೆ.

ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಜು.19 ಮತ್ತು 22 ರಂದು ಕೇವಲ ಎರಡು ದಿನ ಮಾತ್ರ ಪರೀಕ್ಷೆ ನಡೆಸಲು ನಿರ್ಧಾರ ತೆಗೆದು ಕೊಂಡಿದೆ.