Friday, 13th December 2024

ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ: ಆಳ್ವಾಸ್ ವಿದ್ಯಾರ್ಥಿನಿ ಗ್ರೀಷ್ಮಾ ರಾಜ್ಯಕ್ಕೆ ಪ್ರಥಮ

ಬೆಂಗಳೂರು: ಈ ಬಾರಿ ಪೂರಕ ಪರೀಕ್ಷೆಗೆ 53,155 ಮಂದಿ ವಿದ್ಯಾರ್ಥಿಗಳು ನೋಂದಾಯಿಸಿದ್ದು, ಶೇ.55.54 ವಿದ್ಯಾರ್ಥಿಗಳು (29,522 ಮಂದಿ) ಉತ್ತೀರ್ಣ ರಾಗಿದ್ದಾರೆ.

ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಕಟಿಸಿದರು. ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಗ್ರೀಷ್ಮಾ ನಾಯಕ್ 625ಕ್ಕೆ 599 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಬಂದಿದ್ದಾರೆ. 592 ಎರಡನೇ ಅತಿ ಹೆಚ್ಚು ಅಂಕ- ಕಲಬುರಗಿ, 591- ಮೈಸೂರು ಜಿಲ್ಲೆಗೆ ಬಂದಿದೆ.

ಇಂದು ಮಧ್ಯಾಹ್ನ 3 ಗಂಟೆಯ ನಂತರ ತಾತ್ಕಾಲಿಕ ಅಂಕಪಟ್ಟಿ ಇಲಾಖೆ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ ಎಂದು ಸಚಿವರು ಹೇಳಿದರು.