Wednesday, 11th December 2024

ಇಂದು ಮಧ್ಯಾಹ್ನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು : ಸೋಮವಾರ ಮಧ್ಯಾಹ್ನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಿಸಲಿದ್ದಾರೆ.

ಎಸ್‌ಎಸ್‌ಎಸ್ ಸಿ ಫಲಿತಾಂಶದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಬಿ.ಸಿ.ನಾಗೇಶ್, ಎಸ್ ಎಸ್‌ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆ ಚೆನ್ನಾಗಿ ಬರೆದಿರುವ ನಿರೀಕ್ಷೆ ಇದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಕೂಲ್ ಆಗಿ ಸ್ವೀಕರಿಸಬೇಕು. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗುತ್ತಾರೆ. ಅದರೆ ಫಲಿತಾಂಶವನ್ನು ಸಮತೋಲನ ದಿಂದ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಶಾಲೆ ಆರಂಭದ ಕುರಿತಂತೆ ಮಾತನಾಡಿ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ ಮಾಡುತ್ತಿದ್ದೇವೆ. ಮಕ್ಕಳ ಭವಿಷ್ಯ ದೃಷ್ಟಿಯಿಂದ ಶಾಲೆ ಆರಂಭ ಮಾಡಿ ಎಂದು ಪೋಷಕರು, ಮಕ್ಕಳು ಎಲ್ಲಾ ಹೇಳುತ್ತಿದ್ದಾರೆ. ಹೀಗಾಗಿ ಮುಂಜಾ ಗ್ರತಾ ಕ್ರಮಕೈಗೊಂಡು ಶಾಲೆ ಆರಂಭಿಸಲಾಗುವುದು ಎಂದು ತಿಳಿಸಿದರು.

ಇಂದು ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆ ಮಾಡುತ್ತಿದ್ದಂತೇ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣ sslc.karnataka.gov.in, kseeb.kar.nic.in ಅಥವಾ karresults.nic.in ನಲ್ಲಿ ಪ್ರಕಟವಾಗಲಿದೆ.

ವಿದ್ಯಾರ್ಥಿಗಳು ಈ ಮೇಲ್ಕಂಡ ಜಾಲತಾಣಗಳಿಗೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿದ ನಂತ್ರ, ನಿಮ್ಮ ಎಸ್ ಎಸ್ ಎಲ್ ಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.