Sunday, 15th December 2024

ನಾಳೆ ಎಸ್‍ಎಸ್‍ಎಲ್ ಸಿ ಪರೀಕ್ಷಾ ಫಲಿತಾಂಶ ಘೋಷಣೆ

ಬೆಂಗಳೂರು: ಮಧ್ಯಾಹ್ನ ಎಸ್‍ಎಸ್‍ಎಲ್ ಸಿ ಪರೀಕ್ಷಾ ಫಲಿತಾಂಶ ಆಗಸ್ಟ್ 9ರಂದು ಘೋಷಣೆಯಾಗಲಿದ್ದು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಲಿದ್ದಾರೆ ಎಂದು ಕರ್ನಾಟಕ ಮಾಧ್ಯಮಿಕ ಶಾಲಾ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಹೇಳಿದ್ದಾರೆ.

ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ sslc.karnataka.gov.in ನಲ್ಲಿ ಪ್ರಕಟಿಸುವ ನಿರೀಕ್ಷೆಯಿದೆ. ಪರೀಕ್ಷೆ ಯಲ್ಲಿ ಉತ್ತೀರ್ಣರಾಗಲು, ವಿದ್ಯಾರ್ಥಿಗಳು ಒಟ್ಟು ಶೇ.35 ಅಥವಾ 600 ರಲ್ಲಿ 210 ಅಂಕಗಳನ್ನು ಪಡೆಯ ಬೇಕು. ಪಾಸ್ ಸರ್ಟಿಫಿಕೇಟ್ ಪಡೆಯಲು, ಅವರು ಭಾಷಾ ಪರೀಕ್ಷೆಯಲ್ಲಿ ಕನಿಷ್ಠ 70 ಅಂಕಗಳನ್ನು ಪಡೆಯ ಬೇಕು ಎಂದು ತಿಳಿದುಬಂದಿದೆ.

ಕೋವಿಡ್ ಹಿನ್ನಲೆಯಲ್ಲಿ ಕರ್ನಾಟಕವು ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ರದ್ದುಗೊಳಿಸಲಿಲ್ಲ. ಬದಲಿಗೆ ಆಫ್‍ ಲೈನ್ ಮೋಡ್‍ನಲ್ಲಿ ನಡೆಸಿತು. ಹೊಸ ರೂಪದಲ್ಲಿ ಮಾಜಿ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಪರೀಕ್ಷೆ ನಡೆಯಿತು.

ಗಣಿತ, ವಿಜ್ಞಾನ, ಮತ್ತು ಸಮಾಜ ವಿಜ್ಞಾನ ಮತ್ತು ಭಾಷಾ ಪತ್ರಿಕೆಗಳು ಸೇರಿದಂತೆ ಪ್ರಮುಖ ವಿಷಯಗಳಿಗೆ ಎರಡು ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಯಿತು. ಫಲಿತಾಂಶ ಪ್ರಕಟವಾದ ನಂತರ ನಿಮ್ಮ ಎಸ್‍ಎಸ್‍ ಎಲïಸಿ ರಿಸಲ್ಟ್ ವೀಕ್ಷಿಸಲು ಕರ್ನಾಟಕ ಸರ್ಕಾರದ ಅಧಿಕೃತ ಕ್ಲಿಕ್ ಮಾಡಿ.

ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು ಎಂದು ಸುಮಂಗಲಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.