Friday, 22nd November 2024

ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕ್ಷಣಗಣನೆ…

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಎಸ್‌ಎಸ್‌ಎಲ್‌ಸಿ ಫಲಿತಾಂಶವು ಗುರುವಾರ ಮಧ್ಯಾಹ್ನ 12.30ಕ್ಕೆ ಪ್ರಕಟ ವಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ‌ಸಚಿವ ಬಿ.ಸಿ. ನಾಗೇಶ್ ಅವರು ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದಾರೆ. ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಲಾಖೆಯ ವೆಬ್‌ಸೈಟ್‌ ನಲ್ಲಿ ಲಭ್ಯವಾಗಲಿದೆ.

ಫಲಿತಾಂಶವನ್ನುhttps://karresults.nic.in/ಮೂಲಕ ವೀಕ್ಷಿಸಬಹುದಾಗಿದೆ. ವಿದ್ಯಾರ್ಥಿಗಳು ನೋಂದಾಯಿಸಿ ಕೊಂಡಿರುವ ಫೋನ್ ನಂಬರ್‌ಗಳಿಗೆ ಎಸ್‌ಎಂಎಸ್‌ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸಂದರ್ಭದಲ್ಲೂ ಹಿಜಾಬ್ ಗೊಂದಲ ಮುಂದುವರೆದಿತ್ತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 8,73,846 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲು ನೊಂದಣಿಯನ್ನು ಮಾಡಿಕೊಂಡಿದ್ದರು. ಇದರಲ್ಲಿ ಬಹುತೇಕರು ಪರೀಕ್ಷೆಗೆ ಹಾಜರಾಗಿದ್ದರೂ ಬೆರಳೆಣಿಕೆಯ ವಿದ್ಯಾರ್ಥಿ ಗಳಷ್ಟೇ ಗೈರು ಹಾಜರಾಗಿದ್ದರು.

ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸುಲಭವಾದ ಪ್ರಶ್ನೆ ಪತ್ರಿಕೆಯಾದ್ದರಿಂದ ಸಂತಸಗೊಂಡಿದ್ದರು. ಇನ್ನು ಮೌಲ್ಯ ಮಾಪನದ ವೇಳೆಯು ಶಿಕ್ಷಕರು ಕಠಿಣ ದೋರಣೆ ತೋರದೆ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟು ಕೊಂಡು ಮೌಲ್ಯಮಾಪನ ಕಾರ್ಯವನ್ನು ಮುಗಿಸಿದ್ದಾರೆ.

ಇನ್ನು ಕರ್ನಾಟಕ ಸೆಕೆಂಡರಿ ಎಜುಕೇಷನ್ ಬೋರ್ಡ್ (KSEEB) ವೆಬ್ ನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟವಾಗಲಿದೆ.