ಬೆಂಗಳೂರು : ಎಸ್ ಎಸ್ ಎಲ್ ಸಿ ಅಂತಿಮ ಪರೀಕ್ಷೆಗಳು ಮಾ.31 ರಿಂದ ಏ.15ರವರೆಗೆ ನಡೆಯಲಿದ್ದು, ಈ ಬಾರಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲು ಬಹು ಆಯ್ಕೆ ಪ್ರಶ್ನೆಗಳನ್ನ ನೀಡಲಾಗುತ್ತಿದೆ.
ಮಾ.31 ಇಂದಿನಿಂದ ಆರಂಭಗೊಳ್ಳುತ್ತಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿ ದ್ದಾರೆ. ಇವರಲ್ಲಿ ಶಾಲಾ ವಿದ್ಯಾರ್ಥಿಗಳು 7,94,611 ಆಗಿದ್ದರೇ ಪುನರಾ ವರ್ತಿತ ವಿದ್ಯಾರ್ಥಿಗಳು 20,750 ಆಗಿದ್ದಾರೆ.
8,42,811 ನೋಂದಾಯಿತ ವಿದ್ಯಾರ್ಥಿಗಳಿಗಾಗಿ ರಾಜ್ಯಾಧ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯ ಲಾಗಿದೆ. ಸರ್ಕಾರಿ ಶಾಲೆಗಳ 3,60,862, ಅನುದಾನಿತ ಶಾಲೆಗಳ 2,20,831 ಹಾಗೂ ಅನುದಾನ ರಹಿತ ಶಾಲೆಗಳ 2,61,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಹೇಳಿದೆ.
ಬಿ.ಇ.ಓ ನೇತೃತ್ವದ ಸಮಿತಿಯ ಸಮ್ಮುಖದಲ್ಲಿಯೇ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕು ಖಜಾನೆಗಳಿಂದ ಪರೀಕ್ಷೆ ಕೇಂದ್ರಗಳಿಗೆ ರವಾನಿಸಬೇಕು.
ಎಸ್.ಎಸ್.ಎಲ್ಸಿ. ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಇರುವ ಪೊಲೀಸ್ ಸಿಬ್ಬಂದಿ ನೇಮಕ ಮಾಡಬೇಕು. ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸ ಲಾಗಿರುತ್ತದೆ. ಪರೀಕ್ಷೆ ಬರೆಯವ ವಿದ್ಯಾರ್ಥಿ ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳನ್ನು ಹೊರತು ಪಡೆಸಿ ಅನ್ಯರು ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸು ವಂತಿಲ್ಲ. ವಿದ್ಯಾರ್ಥಿಗಳು ಸಮವಸ್ತ್ರಧರಿಸಿ ಪರೀಕ್ಷಾ ಕೊಠಡಿಗೆ ಹಾಜರಾಗಬೇಕಿದ್ದು, ಹಿಜಾಬ್ ಧರಿ ಬಂದರೆ ಪರೀಕ್ಷೆಗೆ ಅವಕಾಶ ಇರುವುದಿಲ್ಲ.
ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಯ ದಿನಗಳಂದು ತನ್ನ ಸಾರಿಗೆ ಬಸ್ ನಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ನೀಡಿತ್ತು. ಈಗ ಮುಂದುವರೆದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೂ ಪರೀಕ್ಷೆಯಂದು ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ನಲ್ಲಿ ಉಚಿತ ವಾಗಿ ಸಂಚರಿಸಲು ಅವಕಾಶ ನೀಡಿದೆ.
`SSLC’ ಮುಖ್ಯ ಪರೀಕ್ಷೆಯ ವೇಳಾಪಟ್ಟಿ
ಮಾರ್ಚ್ 31- ಪ್ರಥಮ ಭಾಷೆ,
ಏಪ್ರಿಲ್ 3- ಗಣಿತ,
ಏಪ್ರಿಲ್ 6- ದ್ವಿತೀಯ ಭಾಷೆ
ಏಪ್ರಿಲ್ 10- ವಿಜ್ಞಾನ,
ಏಪ್ರಿಲ್ 12- ತೃತೀಯ ಭಾಷೆ
ಏಪ್ರಿಲ್ 15- ಸಮಾಜ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ.
Read E-Paper click here