Sunday, 15th December 2024

ಶಿಕ್ಷಕರಿಗೆ ಸಿಹಿ ಸುದ್ದಿ: ಮೂರು ವಾರ ರಜೆ ಘೋಷಿಸಿದ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರ ಅ.30ರವರೆಗೆ ಮೂರು ವಾರಗಳ ಮಧ್ಯಂತರ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದೆ. ರಾಜ್ಯದ ಶಿಕ್ಷಕರಿಗೆ ಬೇಸಿಗೆ ರಜೆಯನ್ನು ಕಡಿತಗೊಳಿಸಿದ್ದರಿಂದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ ದ್ದರು.

ಈ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪತ್ರದಲ್ಲಿ ಮಾಹಿತಿ ನೀಡಿದ್ದು, ಕೋವಿಡ್-19 ಸೋಂಕಿನ ಹಿನ್ನಲೆಯಲ್ಲಿ ಸದ್ಯಕ್ಕೆ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸಹ ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸ ಲಾಗಿದೆ.

ವಿದ್ಯಾರ್ಥಿಗಳು ಹಾಗೂ ಶಿಕ್ಷಕರುಗಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಿಗೆ ಅ,12ರಿಂದ ಮೂರು ವಾರ ಅಂದರೆ ಅ.30 ರವರೆಗೆ ಮಧ್ಯಂತರ ರಜೆ ಘೋಷಿಸಿ ಆದೇಶ ಹೊರಡಿಸಲು ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಿರುತ್ತೇನೆ ಎಂಬು ದಾಗಿ ತಿಳಿಸಿದ್ದಾರೆ.