Friday, 22nd November 2024

ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಶನಿವಾರದಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಸಲಿದ್ದಾರೆ.

ರಾತ್ರಿ ಪಾಳಿಯ ಬಿಎಂಟಿಸಿ ಬಸ್ ಗಳಾದರೂ ರಸ್ತೆಗೆ ಇಳಿದಿದ್ದವು. ಶನಿವಾರ ಯಾವುದೇ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯುವು ದಿಲ್ಲ. ರಾಜ್ಯಾದ್ಯಂತ ಕೆಎಸ್‌ಆರ್ಟಿಸಿ ಬಸ್ ಗಳ ಸಂಚಾರ ಕೂಡ ಅನುಮಾನವೆನ್ನಲಾಗಿದೆ.

1.37 ಲಕ್ಷ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ನಾಲ್ಕು ನಿಗಮಗಳ 18 ಸಾವಿರ ಬಸ್ ಗಳು ನಿಂತಲ್ಲೇ ನಿಂತಿವೆ. ಡಿ.10 ರಂದು ಸಾರಿಗೆ ನೌಕರರು ಪ್ರತಿಭಟನಾ ಮೆರವಣಿಗೆ ನಡೆಸಿ, ರ್ಯಾಲಿ ನಡೆಸಿದರೂ ಸರ್ಕಾರ ಸ್ಪಂದಿಸಲಿಲ್ಲ.

ಸಾವಿರಾರು ಸಾರಿಗೆ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದರಿಂದಾಗಿ ರೊಚ್ಚಿಗೆದ್ದು ಕೆಲಸಕ್ಕೆ ಗೈರು ಹಾಜರಾಗಿ ಹೋರಾಟ ಕೈಗೊಂಡಿದ್ದಾರೆ. ಇಂದಿನಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಭಾಗದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.