Wednesday, 11th December 2024

ಹಾಯ್, ಹಲೋ ಬದಲು ಸ್ವಚ್ಛ ಭಾರತ ಎಂದು ಮಾತುಕತೆ ಆರಂಭಿಸಿ

ವಿಜಯನಗರ/ಹಂಪಿ : ಹಾಯ್, ಹಲೋ ಬದಲು ಸ್ವಚ್ಛ ಭಾರತ ಎಂದು ಮಾತುಕತೆ ಆರಂಭಿಸಿ ಎಂದು ವಿದ್ಯಾರ್ಥಿ ಗಳು, ಯುವ ಜನತೆಗೆ ಸಚಿವ ನಾರಾಯಣಗೌಡ ಕರೆ ನೀಡಿದರು.

ವಿಶ್ವಪ್ರಸಿದ್ಧ ಹಂಪಿಯ ವಿರೂಪಾಕ್ಷ ದೇವಸ್ಥಾನದ ಬಳಿ ಕ್ಲೀನ್ ಇಂಡಿಯಾ ಕಾರ್ಯ ಕ್ರಮಕ್ಕೆ ಚಾಲನೆ ಮಾತನಾಡಿ, ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಹಂಪಿ ವಿಶ್ವಪ್ರಸಿದ್ಧ ಸ್ಥಳ. ಇಲ್ಲಿಗೆ ದೇಶ ವಿದೇಶ ಗಳಿಂದ ಪ್ರವಾಸಿಗರು ಆಗಮಿಸುತ್ತಾರೆ.

ಇಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ದೇಶಕ್ಕೆ ಹೆಸರು ತರಬೇಕು. 100 ಜನರಿಂದ ಸಾವಿರ ಜನ, ಸಾವಿರ ಜನರಿಂದ ಹತ್ತು ಸಾವಿರ ಜನರು ಹೀಗೆ ಎಲ್ಲರೂ ಕೈಗೂಡಿಸುವುದರಿಂದ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿ ಆಗಲಿದೆ. ನಮ್ಮದು ಪ್ರಜಾಪ್ರಭುತ್ವ ದೇಶ. ನಮ್ಮಲ್ಲಿ ಆ ಮಟ್ಟಕ್ಕೆ ಹೋಗುವುದು ಬೇಡ, ನಮ್ಮ ಕೆಲಸವನ್ನು ನಾವೇ ಮಾಡಬೇಕು ಎಂದು ಸಚಿವ ನಾರಾಯಣಗೌಡ ಅವರು ಕರೆ ನೀಡಿದರು.

ಸ್ವಯಂ ಪ್ರೇರಿತವಾಗಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು, ಶಿಕ್ಷಣದ ಸ್ವಚ್ಚತೆಗೆ ಆದ್ಯತೆ ಕೊಡಬೇಕು. ಶಾಲೆ ಕಾಲೇಜುಗಳು ಸೇರಿದಂತೆ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ನಮ್ಮ ದೇಶ ಎಂದು ಕಾಳಜಿ ಬರಬೇಕು. ನನ್ನನ್ನೂ ಸೇರಿ ದಂತೆ ಪ್ರತಿಯೊಬ್ಬರು ಸುಧಾರಣೆ ಮಾಡಿಕೊಂಡರೇ ಸ್ವಚ್ಛ ಭಾರತ ಯಶಸ್ವಿ ಆಗಲಿದೆ ಎಂದು ಹೇಳಿದರು.

ದೇಶದ 744 ಜಿಲ್ಲೆಗಳಲ್ಲಿ ಅಕ್ಟೋಬರ್ 1 ರಿಂದ 31 ರವರೆಗೆ ಕ್ಲೀನ್ ಇಂಡಿಯಾ ಕ್ಯಾಂಪೇನ್ ಹಮ್ಮಿಕೊಳ್ಳಲಾಗಿದೆ‌. ಕರ್ನಾಟಕದಲ್ಲಿ ಐದೂವರೆ ಲಕ್ಷ ಕೆಜಿ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದ್ದು, ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ಸಿಕ್ಕಿರುವು ದಕ್ಕೆ ಸಂತಸ ವ್ಯಕ್ತಪಡಿಸಿದರು.