Saturday, 14th December 2024

ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರ ವಿಫಲ: ಡಿ.ಕೆ ಶಿವಕುಮಾರ್

ಹಿರಿಯೂರು: ‘ರಾಜ್ಯದ ಎಲ್ಲ ವರ್ಗದ ಜನರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಆದರೆ ಈ ವಿಚಾರದಲ್ಲಿ ಸರ್ಕಾರ ವಿಫಲ ವಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಳ್ಳಾರಿಯ ಹೊಸಪೇಟೆಗೆ ತೆರಳುವ ಮಾರ್ಗಮಧ್ಯೆ ಹಿರಿಯೂರಿನಲ್ಲಿ ಮಾಧ್ಯಮ ಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ಈ ವೇಳೆ ಹೊಸ ಜಿಲ್ಲೆ ರಚನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ನೂತನ ಜಿಲ್ಲೆ ರಚನೆ ಬಗ್ಗೆ ಮಾಹಿತಿ ಇಲ್ಲ. ಈವರೆಗೂ ಸರ್ಕಾರ ಆದೇಶ ಹೊರಡಿಸಿಲ್ಲ. ಈ ಬಗ್ಗೆ ಅಧಿಕೃತ ಆದೇಶ ಬಂದ ನಂತರ ನಾನು ಮಾತನಾಡುತ್ತೇನೆ’ ಎಂದರು.