Friday, 25th October 2024

Talakaveri Temple: ತಲಕಾವೇರಿಯಲ್ಲಿ ನಾಳೆ ಪವಿತ್ರ ತೀರ್ಥೋದ್ಭವ

talakaveri temple

ಮಡಿಕೇರಿ: ಕಾವೇರಿಯ (Kaveri River) ಉಗಮಸ್ಥಾನ ತಲಕಾವೇರಿ ಶ್ರೀ ಭಗಂಡೇಶ್ವರ-ತಲಕಾವೇರಿ (Talakaveri Temple) ದೇವಾಲಯದಲ್ಲಿ ಅ. 17ರ ಬೆಳಗ್ಗೆ 7.40ಕ್ಕೆ ತುಲಾ ಸಂಕ್ರಮಣ ಮುಹೂರ್ತದಲ್ಲಿ ಪವಿತ್ರ ತೀರ್ಥೋದ್ಭವ ಜರಗಲಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (DK Shivakumar), ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌. ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕರಾದ ಎ.ಎಸ್‌. ಪೊನ್ನಣ್ಣ, ಡಾ| ಮಂತರ್‌ ಗೌಡ ಮುಂತಾದವರು ಪಾಲ್ಗೊಳ್ಳಲಿದ್ದಾರೆ.

ಪೊಲೀಸ್‌ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು ನಿಯೋಜಿಸಲಾಗಿದೆ. ಭಾಗಮಂಡಲದಿಂದ ತಲಕಾವೇರಿಗೆ ಹಾಗೂ ತಲಕಾವೇರಿಯಿಂದ-ಭಾಗಮಂಡಲಕ್ಕೆ 15 ಬಸ್‌ಗಳು ಓಡಾಡಲಿವೆ.

ತಲಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಅ. 16 ಮತ್ತು 17ರಂದು ತಲಕಾವೇರಿ, ಭಾಗಮಂಡಲ ಮತ್ತು ಚೇರಂಬಾಣೆ ಗ್ರಾಮದ ಸುತ್ತಮುತ್ತ 20 ಕಿ.ಮೀ. ವ್ಯಾಪ್ತಿಯಲ್ಲಿರುವ ಎಲ್ಲ ರೀತಿಯ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್‌ ರಾಜಾ ಅವರು ಆದೇಶಿಸಿದ್ದಾರೆ.

ಇಂದು ಕಾವೇರಿ ಯೋಜನೆ ಉದ್ಘಾಟನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾದ 110 ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವಕಾಂಕ್ಷಿಯ ಕಾವೇರಿ 5ನೇ ಹಂತದ ಯೋಜನೆ ಲೋಕಾರ್ಪಣೆ ಸಮಾರಂಭ ಇಂದು ನಡೆಯಲಿದೆ. ಅಕ್ಟೋಬರ್ 16 ರಂದು ಬೆಳಿಗ್ಗೆ 10.30 ಕ್ಕೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕು ತೊರೆಕಾಡನಹಳ್ಳಿಯ ಬೆಂಗಳೂರು ಜಲ ಮಂಡಳಿ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: D K Shivakumar Column: ಬೆಂಗಳೂರಿನ ಹಳ್ಳಿಗಳಿಗೆ ಬರಲಿದ್ದಾಳೆ ಕಾವೇರಿ ಮಾತೆ